ಒಳ ಉಡುಪಿನಲ್ಲಿ ಚಿನ್ನ ಸಾಗಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ - Mahanayaka

ಒಳ ಉಡುಪಿನಲ್ಲಿ ಚಿನ್ನ ಸಾಗಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

gold
24/06/2022


Provided by

ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.95 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ.

ಭಟ್ಕಳ ಮೂಲದ ಪ್ರಯಾಣಿಕನೋರ್ವನು ಸ್ಟೈಸ್ ಜೆಟ್ ಮೂಲಕ ಜೂ.22ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಈತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಈ ಪ್ರಯಾಣಿಕ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಪೇಪರ್ ಹಾಗೂ ಪ್ಲಾಸ್ಟಿಕ್ ನೊಳಗಿಟ್ಟು ಒಳ ಉಡುಪಿನ ಸ್ಟಿಚ್ ಮಾಡಿರುವ ಕಳ್ಳ ಕಿಸೆಯೊಳಗೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ಈತನ ಕೃತ್ಯವನ್ನು ಪತ್ತೆ ಹಚ್ಚಿರುವ ಕಸ್ಟಮ್ಸ್ ಅಧಿಕಾರಿಗಳು ಮಾಲು ಸಮೇತ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಯಾಣಿಕನಿಂದ 364,500 ಗ್ರಾಂ ತೂಕದ 18,95,400 ರೂ. ಮೊತ್ತದ 24 ಕ್ಯಾರೆಟ್ ಶುದ್ಧ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು

ಒಂದೇ ಮಳೆಗೆ ಕಿತ್ತು ಹೋದ ಪ್ರಧಾನಿಯನ್ನು ಸ್ವಾಗತಿಸಿದ್ದ ಹೊಸ ರಸ್ತೆಗಳು!

ತಾಯಿ, ಇಬ್ಬರು ಮಕ್ಕಳ ಕೊಲೆ ‌ಪ್ರಕರಣ:  ಆರೋಪಿ ಪ್ರವೀಣ್ ಭಟ್ ನಿರ್ದೋಷಿ- ಹೈಕೋರ್ಟ್

ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!

ಆಪರೇಷನ್ ಕಮಲ ಬಾಂಬ್: ಉದ್ಧವ್ ಠಾಕ್ರೆ ಸರ್ಕಾರ ಪತನಕ್ಕೆ ಡೆಡ್ ಲೈನ್

ಇತ್ತೀಚಿನ ಸುದ್ದಿ