ಸಚಿವ ಶ್ರೀರಾಮುಲು ಎದುರೇ ಶೇ.7.5 ಒಳಮೀಸಲಾತಿಗಾಗಿ ಘೋಷಣೆ ಕೂಗಿದ ವಾಲ್ಮೀಕಿ ಸಮುದಾಯ - Mahanayaka
8:09 AM Thursday 18 - September 2025

ಸಚಿವ ಶ್ರೀರಾಮುಲು ಎದುರೇ ಶೇ.7.5 ಒಳಮೀಸಲಾತಿಗಾಗಿ ಘೋಷಣೆ ಕೂಗಿದ ವಾಲ್ಮೀಕಿ ಸಮುದಾಯ

31/10/2020

ಬೆಂಗಳೂರು: ಸಚಿವ ಶ್ರೀರಾಮುಲು ಭಾಗವಹಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯವು ಶೇ.7.5 ಒಳಮೀಸಲಾತಿಗಾಗಿ ಒತ್ತಾಯಿಸಿ ಘೋಷಣೆ ಕೂಗಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಂತೆಯೇ ಈ ಘೋಷಣೆ ಕೇಳಿ ಬಂದಿದೆ.



Provided by

ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಚಿವ ಶ್ರೀರಾಮುಲು ಹಾಗೂ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಒಳಮೀಸಲಾತಿಗಾಗಿ ಘೋಷಣೆ ಕೇಳಿ ಬಂತು.


ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು, ವಾಲ್ಮೀಕಿ ನಾಯಕ ಜನಾಂಗಕ್ಕೆ ಶೇಕಡಾ 7.5 ಒಳಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿದರು.


ಇನ್ನೂ ಈ ಬಗ್ಗೆ ಮಾತನಾಡಿದ ಶ್ರೀರಾಮುಲು,  ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಸರ್ಕಾರವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತದೆ. ಆದರೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಯಾವುದನ್ನೂ ಘೋಷಣೆ ಮಾಡುವಂತಿಲ್ಲ ಎಂದು ಅವರು ಹೇಳಿದರು.


ಇತ್ತೀಚಿನ ಸುದ್ದಿ