11:10 PM Tuesday 9 - September 2025

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ದೂರು

m p kumaraswamy
30/03/2023

ಮೂಡಿಗೆರೆ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಡಿಗೆರೆ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಅವರು ದೂರು ದಾಖಲಿಸಿದ್ದು, ಕುಮಾರಸ್ವಾಮಿ ನಿವಾಸದಲ್ಲಿ ಕಾರ್ಯಕ್ರಮ ಆಯೋಜನೆ, ಚೆಕ್ ವಿತರಣೆ ಹಿನ್ನೆಲೆ ದೂರು ದಾಖಲಾಗಿದೆ.
ಕಾರ್ಯಕ್ರಮವನ್ನ ಅರ್ಧಕ್ಕೆ ನಿಲ್ಲಿಸಿದ್ದ ಚುನಾವಣಾ ಅಧಿಕಾರಿಗಳು, ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಎಂ.ಪಿ.ಕುಮಾರಸ್ವಾಮಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು, ಇತ್ತೀಚೆಗೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದರು, ಇದೀಗ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version