8:46 PM Saturday 15 - November 2025

ಗೋಮಾಂಸ ಸಾಗಿಸುತ್ತಿದ್ದ ಆರೋಪ ಹೊರಿಸಿ ವೃದ್ಧನನ್ನು ಥಳಿಸಿಕೊಂದ ಪಾಪಿಗಳು!

crime
10/03/2023

ಪಾಟ್ನಾ: ಗೋಮಾಂಸ ಸಾಗಿಸುತ್ತಿದ್ದ ಶಂಕೆಯಲ್ಲಿ ಮುಸ್ಲಿಮ್ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಪೊಂದು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ.

ಹಸನ್ ಪುರ ಗ್ರಾಮದ ನಿವಾಸಿ 56 ವರ್ಷದ ನಸೀಮ್ ಖುರೇಷಿ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಪಾಟ್ನಾದ 110 ಕಿಮೀ ವಾಯುವ್ಯದಲ್ಲಿರುವ ಜೋಗಿಯಾ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಸೋದರಳಿಯ ಫಿರೋಜ್ ಅಹ್ಮದ್ ಖುರೇಷಿ ಅವರನ್ನು ಭೇಟಿಯಾಗಲು ಹೊರಟಿದ್ದ ನಸೀಮ್ ಖುರೇಷಿ ಅವರನ್ನು ಅಡ್ಡಗಟ್ಟಿದ ಗುಂಪು ದನದ ಮಾಂಸ ಸಾಗಿಸುತ್ತಿರುವ ಆರೋಪ ಹೊರಿಸಿದೆ. ಬಳಿಕ ನಸೀಮ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಖುರೇಷಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸರಪಂಚ ಸುಶೀಲ್‍ಸಿಂಗ್ ಮತ್ತು ಇತರ ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಪರಾರಿಯಾಗಿರುವ ಮತ್ತಿತರ ಪತ್ತೆಗೂ ಕಾರ್ಯಚರಣೆ ಕೈಗೊಳ್ಳಲಾಗಿದೆ. ಇನ್ನೂ ಮೃತ ವ್ಯಕ್ತಿ ನಿಜವಾಗಿಯೂ ದನದ ಮಾಂಸ ಸಾಗಿಸುತ್ತಿದ್ದರೆ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೆಡೆ ಕೇಂದ್ರ ಸರ್ಕಾರವು ಗೋವುಗಳನ್ನು ಕಡಿದು ವಿದೇಶಕ್ಕೆ ದಾಖಲೆಯ ಪ್ರಮಾಣದಲ್ಲಿ ವಿದೇಶಗಳಿಗೆ ಗೋಮಾಂಸ ಪೂರೈಕೆ ಮಾಡುತ್ತಿದೆ. ಇನ್ನೊಂದೆಡೆ ಗೋಮಾಂಸದ ಹೆಸರಿನಲ್ಲಿ ಹತ್ಯೆಗಳು ನಡೆಯುತ್ತಿದೆ. ಇದಕ್ಕೆ ಕೊನೆ ಎಂದು ಅನ್ನೋ ಪ್ರಶ್ನೆಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version