50 ವರ್ಷಗಳ ನಂತರ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಚುನಾವಣೆಯಲ್ಲಿ ಓಂ ಬಿರ್ಲಾ ಮತ್ತು ಕೆ ಸುರೇಶ್ ಮುಖಾಮುಖಿ

ಇಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಪುನರಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡುವ ನಿರ್ಣಯವನ್ನು ಮಂಡಿಸಲಿದ್ದಾರೆ.
ಓಂ ಬಿರ್ಲಾ ಅವರು ಎರಡನೇ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಇವರು ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಬಣದ ಕೆ ಸುರೇಶ್ ಅವರನ್ನು ಎದುರಿಸಲಿದ್ದಾರೆ.
ದಲಿತ ಕಾಂಗ್ರೆಸ್ ನಾಯಕ ಮತ್ತು ಎಂಟು ಬಾರಿ ಸಂಸದರಾಗಿದ್ದ ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲು ಇಂಡಿಯಾ ಮೈತ್ರಿಕೂಟ ನಿರ್ಧಾರ ಮಾಡಿದೆ.
ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಕೆ ಸುರೇಶ್, ಸಂಖ್ಯೆ ಒಂದು ಸಮಸ್ಯೆಯಲ್ಲ. ಆದರೆ ಎನ್ ಡಿಎ ಸಂಪ್ರದಾಯವನ್ನು ಮುರಿದಿರುವುದು ಏಕೈಕ ಸಮಸ್ಯೆಯಾಗಿದೆ ಎಂದು ಹೇಳಿದರು. “ಅದಕ್ಕಾಗಿಯೇ, ನಾವು (ಚುನಾವಣೆ) ಹೋರಾಡುತ್ತಿದ್ದೇವೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth