12:37 PM Wednesday 15 - October 2025

ಒಮಿಕ್ರಾನ್  ಭೀತಿಯ ನಡುವೆಯೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರಿಗೆ ಕೊವಿಡ್ ದೃಢ!

omicron virus
28/11/2021

ಬೆಂಗಳೂರು:  ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಅಪಾಯಕಾರಿ ಕೊವಿಡ್ ರೂಪಾಂತರಿ ವೈರಸ್ ಒಮಿಕ್ರಾನ್  ಆತಂಕ ಸೃಷ್ಟಿಸಿದ್ದು, ವಿವಿಧ ದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲು  ಸರ್ಕಾರ ಮುಂದಾಗಿದ್ದು ಜೊತೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನೀಡಿದ್ದ ಅನುಮತಿಯನ್ನು ಮರುಪರಿಶೀಲನೆ ನಡೆಸಲು ಮುಂದಾಗಿದೆ.

ಈವರೆಗೆ ಭಾರತದಲ್ಲಿ ಒಮಿಕ್ರಾನ್ ಸೋಂಕಿನ ಯಾವುದೇ ಪ್ರಕರಣಗಳು ಪತ್ತೆಯಾಗದೇ ಇರುವುದು ಸಮಾಧಾನಕರವಾಗಿದ್ದರೂ, ದಕ್ಷಿಣ ಆಫ್ರಿಕಾದಿಂದ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊವಿಡ್ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ 94 ಮಂದಿ ಪ್ರಯಾಣಿಕರು ಬಂದಿಳಿದಿದ್ದಾರೆ. ಇವರ ಪೈಕಿ ಇಬ್ಬರಿಗೆ ಕೊವಿಡ್ ದೃಢಪಟ್ಟಿದೆ ಎನ್ನಲಾಗಿದೆ. ಆದರೆ ಈ ಇಬ್ಬರಿಗೂ ತಗಲಿರುವ ವೈರಸ್ ಡೆಲ್ಟಾ ಪ್ಲಸ್ ಆಗಿದೆ ಎನ್ನುವುದು ತಿಳಿದು ಬಂದಿದೆ. ಹೀಗಾಗಿ ಜನ ಸದ್ಯ ನಿಟ್ಟುಸಿರು ಬಿಡುವಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಖಾಲಿ ಪೇಪರ್ ಗೆ ಮೃತ ವೃದ್ಧೆಯ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು!

ಕೊವಿಡ್ ಸೋಂಕು ಮತ್ತೆ ಉಲ್ಬಣ: ಹೊಸ ಮಾರ್ಗಸೂಚಿ ಬಿಡುಗಡೆ

ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋದ ಬಂಡುಕೋರ | ರಮೇಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪಂಚ್

ಹಾವು ಹಿಡಿಯಲು ಹೋಗಿದ್ದ ವ್ಯಕ್ತಿಯನ್ನು 5ಕ್ಕೂ ಅಧಿಕ ಬಾರಿ ಕಚ್ಚಿ ಕೊಂದ ಹಾವು!

ಇತ್ತೀಚಿನ ಸುದ್ದಿ

Exit mobile version