ಓಮ್ನಿ ಹಾಗೂ ಅಪೇ ಆಟೋ ನಡುವೆ ಭೀಕರ ಅಪಘಾತ: ಮಹಿಳೆ ಸಾವು
ಮೈಸೂರು: ಓಮ್ನಿ ಹಾಗೂ ಅಪೇ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ ನಡೆದಿದೆ.
ವಿಶಾಲಾಕ್ಷಿ(29) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಮೈಸೂರಿನ ಜೆಪಿ ನಗರ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮೃತ ವಿಶಾಲಾಕ್ಷಿ ಪತಿ ಶಂಕರ್ ಹಾಗೂ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಆಪೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಳವಳ್ಳಿ ತಾಲೂಕಿನ ನಂಜೇಗೌಡನಪುರ ಗ್ರಾಮಸ್ಥರಾದ ರಾಜು, ಮಣಿ, ರತ್ನಮ್ಮ ಸಹ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























