ಪತ್ನಿಯನ್ನು ಕರೆಯಲು ಹೋಗಿದ್ದ ಅಳಿಯ ಅತ್ತೆಗೆ ಚಾಕುವಿನಿಂದ ಇರಿದು ಪರಾರಿ - Mahanayaka
10:52 PM Tuesday 18 - November 2025

ಪತ್ನಿಯನ್ನು ಕರೆಯಲು ಹೋಗಿದ್ದ ಅಳಿಯ ಅತ್ತೆಗೆ ಚಾಕುವಿನಿಂದ ಇರಿದು ಪರಾರಿ

getha
14/06/2023

ಬೆಂಗಳೂರು: ಹೆಂಡತಿಯನ್ನು ಕರೆಯಲು ಹೋಗಿದ್ದ ವ್ಯಕ್ತಿಯೋರ್ವ ಅತ್ತೆಗೆ ಚಾಕು ಇರಿದು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಗೀತಾ ಎನ್ನುವವರು ಅಳಿಯ ಮನೋಜ್ ನಿಂದ ಚಾಕು ಇರಿತಕ್ಕೊಳಾಗದ ಅತ್ತೆಯಾಗಿದ್ದಾರೆ.

ಈ ಘಟನೆ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ. ಕೋಲಾರ ಮೂಲದ ಮನೋಜ್ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಂಡ್ಯ ಮೂಲದ ವರ್ಷಿತಾ ಪರಿಚಯವಾಗಿ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಗಂಡ ನಿತ್ಯ ಕುಡಿದ ಗಲಾಟೆ ಮಾಡುತ್ತಾನೆಂಬ ಕಾರಣಕ್ಕೆ ಹೆಂಡತಿ ಗಂಡನ‌ ಮನೆ ಬಿಟ್ಟು ತವರು ಮನೆಗೆ ಬಂದಿದ್ದಳು

ಹೆಂಡತಿಯನ್ನು ಜೊತೆಗೆ ಕಳುಹಿಸಿ ಕೊಡುವಂತೆ ಅತ್ತೆ ಗೀತಾ ಜೊತೆಗೆ ಗಲಾಟೆ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅಳಿಯ ಅತ್ತೆಗೆ ಚಾಕು ಇರಿದು ಪರಾರಿಯಾಗಿದ್ದ.ಆರೋಪಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ