ಮೇ 5ಕ್ಕೆ ಎಸ್ ಡಿ ಪಿ ಐ ಬಂಟ್ವಾಳ ವತಿಯಿಂದ ಬೃಹತ್ ಬಹಿರಂಗ ಪ್ರಚಾರ ಸಭೆ: ರಾಷ್ಟ್ರಾಧ್ಯಕ್ಷ ಎಮ್.ಕೆ. ಫೈಝಿ ಭಾಗಿ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಮೇ 5, 2 ರಂದು ವಿಧಾನಸಭಾ ಚುನಾವಣಾ ನಿಮಿತ್ತ ಬೃಹತ್ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಬಂಟ್ವಾಳ ಕ್ಷೇತ್ರಾಧ್ಯಕ್ಷ ಮೂನಿಷ್ ಆಲಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಬೃಹತ್ ಪ್ರಚಾರ ಸಭೆಗೆ ಎಸ್ ಡಿ ಪಿ ಐ ರಾಷ್ಟ್ರಾಧ್ಯಕ್ಷ ಎಮ್.ಕೆ.ಫೈಝಿ ಭಾಗಿಯಾಗಲಿದ್ದು, ಇದರ ಜೊತೆಗೆ ಇತರ ನಾಯಕರೂ ಉಪಸ್ಥಿತರಿರುತ್ತಾರೆ ಎಂದು ಅವರು ಹೇಳಿದ್ದಾರೆ.
ಮೇ 5ರಂದು ಸಂಜೆ 7 ಗಂಟೆಗೆ ಬಿ.ಸಿ.ರೋಡಿನ ಕೈಕಂಬ ಜಂಕ್ಷನ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸರ್ವರನ್ನು ಆಹ್ವಾನಿಸುತ್ತಿದ್ದೇವೆ ಎಂದು ಅವರು ಆಮಂತ್ರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw