11:27 AM Friday 19 - December 2025

ಒಂದೆಡೆ ಸಚಿವ ಚಲುವರಾಯಸ್ವಾಮಿ ಧಿಕ್ಕಾರ, ಮತ್ತೊಂದೆಡೆ ಜಯಕಾರ!

cheluvanarayana swamy
12/08/2023

ಕೃಷಿ ಇಲಾಖೆ ಅಧಿಕಾರಿಗಳ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ  ಆಹೋರಾತ್ರಿ ಧರಣಿ ಆರಂಭಿಸಿದೆ.

ನಗರದ ಸರ್ ಎಂ ವಿ ಪ್ರತಿಮೆ ಎದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು,ಸಚಿವ ಚೆಲುವರಾಯಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಕೂಗಿದರೆ ಕಾಂಗ್ರೆಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿದರು.

ಉಭಯ ಪಕ್ಷಗಳ ಕಾರ್ಯಕರ್ತರು ಧ್ವನಿ ವರ್ಧಕ ಹಾಕಿಕೊಂಡು ಘೋಷಣೆ ಕೂಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಭಾರತ್ ಮಾತೆಗೆ ಜೈಕಾರ ಹಾಕುತ್ತಾ.ಮತದಾರರ ಕಿವಿಗೆ ಹೂವು ಇಟ್ಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಒಕ್ಕಲಿಗರ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ನೀಡಬೇಕಾಗಿದ್ದ ಸಹಾಯಧನ ಕಡಿತ ಮಾಡಿದ್ದು, ಪರಿಶಿಷ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿದ್ದಾರೆ, ರೈತರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಕಡಿವಾಣ ಹಾಕಿದ್ದು, ಕೇಂದ್ರ ಸರ್ಕಾರದ ಅಕ್ಕಿಯನ್ನು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದು, ರಾಜ್ಯದ ಖಜಾನೆಯನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಆಕ್ರೋಶಿಸಿದರು.

ಮಂಡ್ಯ ಜಿಲ್ಲೆಯ ಮಾನ ವನ್ನು ಸಚಿವ ಚೆಲುವರಾಯಸ್ವಾಮಿ ಹರಾಜು ಹಾಕುತ್ತಿದ್ದಾರೆ,ಇವರ ಭ್ರಷ್ಟಾಚಾರ ಮಿತಿಮೀರಿದೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು, ಮಾಜಿ ಸಚಿವ ಕೆ ಗೋಪಾಲಯ್ಯ,ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್,ಇಂಡು ವಾಳು ಸಚ್ಚಿದಾನಂದ, ಅಶೋಕ್ ಜಯರಾಮ್ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

Exit mobile version