ಒಣಗಲು ಹಾಕಿದ್ದ ಅಡಿಕೆ ಕಳವು: ಆರೋಪಿಯನ್ನು ಬಂಧಿಸಿದ ಪೊಲೀಸರು
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ ಭೋವಿ(50) ಬಂಧಿತ ವ್ಯಕ್ತಿ. ಇವರಿಂದ 105 ಕೆಜಿ ಅಡಿಕೆ, ಕಳವು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೋಳಂಗಡಿ ನಿವಾಸಿ ಐವನ್ ಥೋರಸ್ ಎಂಬವರು ತನ್ನ ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಅಡಿಕೆ ಒಣಗಲು ಹಾಕಿದ್ದರು. ಡಿ.24 ಮತ್ತು ಡಿ.29ರ ಮಧ್ಯದ ಅವಧಿಯಲ್ಲಿ ಇದರಿಂದ 100-120 ಕೆ.ಜಿ ಅಡಿಕೆಯನ್ನು ಯಾರೋ ಕಳವುಗೈದಿದ್ದಾರೆ ಎಂದು ದೂರು ನೀಡಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಬಂಧಿತ ವ್ಯಕ್ತಿ ಮಂಜುನಾಥ ಭೋವಿ ವಿರುದ್ಧ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ.ಆರೋಪಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























