ರಾಜ್ಯದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನದಲ್ಲಿ 271 ಜನ ಕೊರೊನಾಕ್ಕೆ ಬಲಿ - Mahanayaka

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನದಲ್ಲಿ 271 ಜನ ಕೊರೊನಾಕ್ಕೆ ಬಲಿ

covid 19
01/05/2021

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು, ಇಂದು ಒಂದೇ ದಿನದಲ್ಲಿ 271 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದೆ.

ಒಟ್ಟು  15,64,132 ಕೊರೊನಾ ಸೋಂಕಿತರು ರಾಜ್ಯದಲ್ಲಿದ್ದು, ಇಂದು ಒಂದೇ ದಿನದಲ್ಲಿ 18,341 ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 11,43,250 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಬರೋಬ್ಬರಿ 4,05,068 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ 15,794 ಸೋಂಕಿತರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 19,353 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 162 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,70,993 ಕ್ಕೆ ಏರಿಕೆಯಾಗಿದೆ.

ಒಂದೆಡೆ ಕೊರೊನಾ ಬಲಿ ಪಡೆಯುತ್ತಿದ್ದರೆ, ಇನ್ನೊಂದೆಡೆ ಉದ್ಯೋಗ, ವೇತನವಿಲ್ಲದೇ ಜನರು ಆಹಾರಕ್ಕಾಗಿ ಪರದಾಡುವಂತಾಗಿದೆ. ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಈ ಬಗ್ಗೆ ಯಾವುದೇ ಗಮನವನ್ನು ನೀಡುತ್ತಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ