ಕೈಮೀರುತ್ತಿದೆ ಪರಿಸ್ಥಿತಿ: ಒಂದೇ ದಿನದಲ್ಲಿ 2,17,353 ಜನರಲ್ಲಿ ಕೊರೊನಾ ಸೋಂಕು - Mahanayaka
12:49 AM Saturday 18 - October 2025

ಕೈಮೀರುತ್ತಿದೆ ಪರಿಸ್ಥಿತಿ: ಒಂದೇ ದಿನದಲ್ಲಿ 2,17,353 ಜನರಲ್ಲಿ ಕೊರೊನಾ ಸೋಂಕು

corona
16/04/2021

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,17,353 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ.


Provided by

ಕಳೆದ 24 ಗಂಟೆಯಲ್ಲಿ 1,185 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,74,308 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15,69,743 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,25,47,866 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,18,302 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 14,73,210 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 26,34,76,625 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 11,72,23,509 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಇತ್ತೀಚಿನ ಸುದ್ದಿ