ಹೃದಯ ವಿದ್ರಾವಕ ಘಟನೆ: ಕಾರಿನಲ್ಲೇ ಒಂದೇ ಕುಟುಂಬದ ಮೂವರ ಸಜೀವ ದಹನ - Mahanayaka
1:03 AM Thursday 16 - October 2025

ಹೃದಯ ವಿದ್ರಾವಕ ಘಟನೆ: ಕಾರಿನಲ್ಲೇ ಒಂದೇ ಕುಟುಂಬದ ಮೂವರ ಸಜೀವ ದಹನ

mandya news
04/06/2021

ಮಂಡ್ಯ: ಕಾರು ಅಪಘಾತಕ್ಕೀಡಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಕಾರಿನೊಳಗೆ ಸಿಲುಕಿದ 11 ವರ್ಷ ವಯಸ್ಸಿನ ಬಾಲಕ ಸೇರಿದಂತೆ ಒಂದೇ ಕುಟುಂಬದ ಮೂವರು  ಸಜೀವವಾಗಿ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪ ಇಂದು ಮುಂಜಾನೆ ನಡೆದಿದೆ.


Provided by

ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕನಕಪುರ ರಸ್ತೆಯ ಮಹದೇಶ್ವರ ಪೆಟ್ರೋಲ್ ಬಂಕ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು,  ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಈ ವೇಳೆ ಕಾರಿನಿಂದ ಹೊರಗೆ ಬರಲಾಗದೇ ಮೂವರು ಸಜೀವವಾಗಿ ದಹನವಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಮೂಲದ 44 ವರ್ಷ ವಯಸ್ಸಿನ ಶೇಖ್ ಫೈಝಲ್, 33 ವರ್ಷ ವಯಸ್ಸಿನ ಮೆಹಕ್ ಹಾಗೂ 11 ವರ್ಷ ವಯಸ್ಸಿನ ಬಾಲಕ ಆದಿಲ್ ಮೃತಪಟ್ಟವರಾಗಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಘಟನೆಯ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ