ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಘೋಷಣೆ - Mahanayaka

ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಘೋಷಣೆ

01/02/2021

ನವದೆಹಲಿ:  ಕೇಂದ್ರ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದೆ. ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಿದರು.

ಒನ್ ನೇಷನ್ , ಒನ್ ರೇಷನ್ ಕಾರ್ಡ್ ಯೋಜನೆ ಜಾರಿ ಮಾಡಲಾಗುವುದು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಎರಡೂ ಕಡೆಗಳಲ್ಲಿಯೂ ಈ ಯೋಜನೆ ಜಾರಿಯಾಗಲಿದೆ ಎಂದು ನಿರ್ಮಲಾ ತಿಳಿಸಿದರು.

ಕಟ್ಟಡ ಕಾರ್ಮಿಕರು, ಅಸಂಘಟಿತ ವಲಯ ಕಾರ್ಮಿಕರ ಮಾಹಿತಿ ಸಂಗ್ರಹಕ್ಕಾಗಿ ಹೊಸ ಪೋರ್ಟಲ್ ಬರಲಿದೆ ಎಂದು ನಿರ್ಮಲಾ ಸೀತಾರಾಮನ್ ಇದೇ ಸಂದರ್ಭದಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ