ವಯನಾಡ್ ನಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ - Mahanayaka

ವಯನಾಡ್ ನಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

rahul gandhi
03/04/2024

ವಯನಾಡ್: ಲೋಕಸಭಾ ಚುನಾವಣೆ ಹಿನ್ನೆಲೆ ಕೇರಳದ ವಯನಾಡ್ ನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಭಾರೀ ಜನಸ್ತೋಮ ನೆರೆದಿರುವುದು ವಿಶೇಷವಾಗಿತ್ತು.
2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡಿನಲ್ಲಿ 10,92,197 ಮತಗಳ ಪೈಕಿ 7,06,367 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಈ ಕ್ಷೇತ್ರದಲ್ಲಿ ಸಿಪಿಐ ಅಭ್ಯರ್ಥಿ ಎರಡನೇ ಸ್ಥಾನದಲ್ಲಿದ್ದಾರೆ.

ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕೆ ಸುರೇಂದ್ರನ್ ಮಾತನಾಡಿ, ರಾಹುಲ್ ಗಾಂಧಿ ಅಂತಿಮವಾಗಿ ವಯನಾಡಿಗೆ ನಾಮಪತ್ರ ಸಲ್ಲಿಸಲು ಬರುತ್ತಿರುವುದು ಒಳ್ಳೆಯದು, ಇವರು ಕ್ಷೇತ್ರದಲ್ಲಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.


Provided by

ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು. ರಾಹುಲ್ ಗಾಂಧಿ ಅವರು 2004, 2009 ಮತ್ತು 2014 ರಲ್ಲಿ ಅಮೇಥಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ