ಶುಲ್ಕ ಪಾವತಿಸದ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಇಲ್ಲ! | ಸಭೆ ಕರೆದ ಶಿಕ್ಷಣ ಇಲಾಖೆ - Mahanayaka

ಶುಲ್ಕ ಪಾವತಿಸದ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಇಲ್ಲ! | ಸಭೆ ಕರೆದ ಶಿಕ್ಷಣ ಇಲಾಖೆ

27/11/2020

ಬೆಂಗಳೂರು: ಶಾಲಾ ಶುಲ್ಕ ಪಾವತಿಸದ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸಲು ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸಭೆ ಕರೆದು ಈ ಬಗ್ಗೆ ಮಾಹಿತಿ ಪಡೆದಿದೆ.

ಖಾಸಗಿ ಶಾಲೆಗಳ ಸಂಘಟನೆಯ ಪ್ರತಿನಿಧಿಗಳ ಜೊತೆ ಆಯುಕ್ತ ವಿ.ಅನ್ಬುಕುಮಾರ್ ಈ ಸಭೆಯ ನೇತೃತ್ವವಹಿಸಿದ್ದು, ಸಭೆಯಲ್ಲಿ ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕೊವಿಡ್ 19 ಹಿನ್ನೆಲೆಯಲ್ಲಿ ಸಾರ್ವಜನಿಕರು ತೀವ್ರ ಸಂಕಷ್ಟದಲ್ಲಿದ್ದು, ಇದೇ ಸಂದರ್ಭದಲ್ಲಿ ಕೆಲವು ಖಾಸಗಿ ಶಾಲೆಗಳು, ಸಂಕಷ್ಟದಲ್ಲಿರುವ ಪೋಷಕರನ್ನು ಮತ್ತಷ್ಟು ಕಷ್ಟಕ್ಕೆ ದೂಡಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ