ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ವಿರುದ್ಧದ ಪ್ರತಿಭಟನೆಗೆ ಕೇವಲ ಅರ್ಧ ಗಂಟೆ ಅವಕಾಶ! - Mahanayaka

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ವಿರುದ್ಧದ ಪ್ರತಿಭಟನೆಗೆ ಕೇವಲ ಅರ್ಧ ಗಂಟೆ ಅವಕಾಶ!

cm siddaramaiah
07/02/2024


Provided by

ನವದೆಹಲಿ/ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬ ಘೋಷಣೆಯೊಂದಿಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ನಡೆಸಲಿದ್ದಾರೆ.

ರಾಜ್ಯದ ಕಾಂಗ್ರೆಸ್‌ ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ದೆಹಲಿಯ ಜಂತರ್ ಮಂತರ್ ನಲ್ಲಿರುವ ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದಾರೆ.

ದೆಹಲಿ ಪೊಲೀಸರು ಮಧ್ಯಾಹ್ನ 12:30ರಿಂದ 1ಗಂಟೆಯವರೆಗೆ ಮಾತ್ರ  ಜಂತರ್ ಮಂತರ್​​ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ದಾರೆ. ಇದರಿಂದಾಗಿ ಕೇವಲ ಅರ್ಧ ಗಂಟೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಎಸಗುತ್ತಿರುವ ತಾರತಮ್ಯವನ್ನು ಪ್ರಶ್ನಿಸುವಂತಾಗಿದೆ.

ಸರ್ಕಾರದ ಪ್ರತಿಭಟನೆ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬಿಜೆಪಿ ಮತ್ತು ಜೆಡಿಎಸ್​ ಸಂಸದರು ಪ್ರತಿಭಟನೆಗೆ ಬರಬೇಕು ವಿರೋಧ ಪಕ್ಷಗಳ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಿದ್ದರು.

ಇನ್ನೂ ಇಂದಿನ ಪ್ರತಿಭಟನೆಗೆ ಕನ್ನಡದ ಸ್ಪಷ್ಟ ನೀಡುವ ಉದ್ದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಕನ್ನಡ ಬಾವುಟಗಳನ್ನ ದೆಹಲಿಗೆ ತೆಗೆದುಕೊಂಡು ಹೋಗಿದ್ದಾರೆ. ಕನ್ನಡಿಗರ ಅಸ್ಮಿತೆ, ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ