ನಟ ದರ್ಶನ್ ಭೇಟಿಗೆ ಈ 7 ಜನರಿಗೆ ಮಾತ್ರವೇ ಅವಕಾಶ!
ಬೆಂಗಳೂರು: ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ದರ್ಶನ್ ಭೇಟಿಗೆ 7 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. 7 ಜನರು ಕೇರ್ ಟೇಕರ್ಸ್ ಹೊರತುಪಡಿಸಿದರೆ, ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೇಶ್, ತಾಯಿ ಮೀನಾ, ಸಹೋದರ ದಿನಕರ್, ಸಹೋದರಿ, ನಟ ಧನ್ವೀರ್ ಹಾಗೂ ದರ್ಶನ್ ಪರ ವಕೀಲರಿಗೆ ಮಾತ್ರವೇ ಭೇಟಿಗೆ ಅವಕಾಶವಿದೆ.
ಬಿಜಿಎಸ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಸ್ಪೆಷಲ್ ರೂಮ್ ನಲ್ಲಿ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಳ್ಳಾರಿ ಜೈಲು ಪಾಲಾಗಿದ್ದರು. ಬೆನ್ನು ನೋವಿನ ಹಿನ್ನೆಲೆ ಅವರಿಗೆ ಚಿಕಿತ್ಸೆ ಪಡೆಯಲು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: