ಭಾರತೀಯರನ್ನು ಕರೆತರುವ ಕಾರ್ಯಚರಣೆಗೂ ‘ಗಂಗಾ’ ಹೆಸರಿಟ್ಟು ಪ್ರಧಾನಿ ಮೋದಿ ರಾಜಕೀಯ: ಸಿದ್ದರಾಮಯ್ಯ ಆಕ್ರೋಶ - Mahanayaka

ಭಾರತೀಯರನ್ನು ಕರೆತರುವ ಕಾರ್ಯಚರಣೆಗೂ ‘ಗಂಗಾ’ ಹೆಸರಿಟ್ಟು ಪ್ರಧಾನಿ ಮೋದಿ ರಾಜಕೀಯ: ಸಿದ್ದರಾಮಯ್ಯ ಆಕ್ರೋಶ

siddaramaiha
02/03/2022


Provided by

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯುಕ್ರೇನ್ ನಿಂದ ಭಾರತೀಯರನ್ನು ಕರೆತರುವ ಕಾರ್ಯಚರಣೆಗೂ ‘ಗಂಗಾ’ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಗಳ ಸುರಿಮಳೆಯನ್ನು ಸುರಿಸಿರುವ ಸಿದ್ದರಾಮಯ್ಯ,  ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಾಚರಣೆ ಬಗ್ಗೆ ಸರ್ಕಾರದಂತೆ ಪ್ರಚಾರ ಮಾಡಿ, ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ಯುಕ್ರೇನ್ ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಯುಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಯುಕ್ರೇನ್ ಮತ್ತು ರಷ್ಯಾ ದೇಶಗಳೆರಡರ ವೈಷಮ್ಯದ ನಡುವೆ ಸಿಕ್ಕಿಹಾಕಿಕೊಂಡು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉಕ್ರೇನ್ ನಿಂದ ಸ್ಥಳಾಂತರ: ವಿಶ್ವಮಟ್ಟದಲ್ಲಿ ಭಾರತದ ಶಕ್ತಿ ಹೆಚ್ಚಳವಾಗಿರುವ ಸೂಚನೆ:  ಪ್ರಧಾನಿ ಮೋದಿ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್  ಗೆ ಇದೆ ಹಲವು ಗುಪ್ತ ಕಾಯಿಲೆಗಳು!

ಅಣುಬಾಂಬ್ ಪ್ರಯೋಗಕ್ಕೆ ಸಿದ್ಧವಾಗ್ತಿದೆಯಾ ರಷ್ಯಾ? |  ತನ್ನ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಪುಟಿನ್

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ: ಸುರಕ್ಷಿತವಾಗಿ ಕೀವ್ ತೊರೆದ ಭಾರತೀಯರು; ಕಾರ್ಯಾಚರಣೆಗೆ 26 ವಿಮಾನ ಬಳಕೆ

ಇತ್ತೀಚಿನ ಸುದ್ದಿ