ಅಸ್ತಿತ್ವಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳು ಶೋ ಮಾಡುತ್ತಿವೆ : ಬಸವರಾಜ ಬೊಮ್ಮಾಯಿ - Mahanayaka
10:15 AM Tuesday 18 - November 2025

ಅಸ್ತಿತ್ವಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳು ಶೋ ಮಾಡುತ್ತಿವೆ : ಬಸವರಾಜ ಬೊಮ್ಮಾಯಿ

basavaraj bomyi
17/07/2023

ಬೆಂಗಳೂರು: ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೇ ಕಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೇ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗವಾಡಿದ್ದಾರೆ‌.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ UPA ಅಂಗ ಪಕ್ಷಗಳ ಸಭೆಯಿಂದ ಏನೂ ಪ್ರಯೋಜನವಿಲ್ಲ. ಮೋದಿ ಅವರದು ಮೇರು ವ್ಯಕ್ತಿತ್ವ, ರಾಷ್ಟ್ರದಲ್ಲಿ 9 ವರ್ಷದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸೇರಿ ಎಲ್ಲಾ ರಂಗದಲ್ಲೂ ದೊಡ್ಡ ಬದಲಾವಣೆ ತಂದು ದೇಶದವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ‌‌ ಎಂದರು.

ವಿಶ್ವದ ಎಲ್ಲಾ ರಾಷ್ಟ್ರಗಳ ಕೋವಿಡ್ ನಿರ್ವಹಿಸಲು ವಿಫಲವಾದಗ ಮೋದಿ ಉತ್ತಮವಾಗಿ ನಿರ್ವಹಣೆ ಮಾಡಿದರು.
ಅದಕ್ಕಾಗಿ ಇವತ್ತು ಭಾರತಕ್ಕೆ ಗೌರವ ಇದೆ , ಪ್ರಧಾನಿ ಮೋದಿ ನಾಯಕತ್ವವನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ರಾಷ್ಟ್ರದ ಪ್ರತಿ ಹಳ್ಳಿಗೂ ಮೋದಿ ಕಾರ್ಯಕ್ರಮ ಮುಟ್ಟಿದೆ ಎಂದು ಹೇಳಿದರು.

ಪ್ರತಿಪಕ್ಷಗಳು ಅವರ ಅಸ್ತಿತ್ವವನ್ನೇ ಅವರು ಕಾಪಾಡಲು ಸಾಧ್ಯವಿಲ್ಲ. ಇಲ್ಲಿ ಬಂದು ಶೋ ಮಾಡೊ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಅಂತ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕುವುದು ನಿಶ್ಚಿತ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ