12:37 AM Friday 11 - September 2026

ರಿಕ್ಷಾಗಳ ಕಲರ್ ಕೋಡಿಂಗ್ ಆದೇಶವನ್ನು ತಕ್ಷಣ ಜಾರಿಗೆ ತರಲು ರಿಕ್ಷಾ ಚಾಲಕ ಮಾಲಕರ ಸಂಘ ಒತ್ತಾಯ

auto
28/12/2022

ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ರಿಕ್ಷಾಗಳ ಕಲರ್ ಕೋಡಿಂಗ್ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು. ನಗರದೊಳಗೆ ಗ್ರಾಮಾಂತರ ರಿಕ್ಷಾಗಳು ಅಕ್ರಮವಾಗಿ ಸಂಚರಿಸಿ ಬಾಡಿಗೆ ಪಡೆಯುವುದನ್ನು ನಿಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆಟೊ ರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟ ಆಗ್ರಹಿಸಿದೆ.

ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಗೌರವಾಧ್ಯಕ್ಷ ವಿಷ್ಣುಮೂರ್ತಿ ಭಟ್,  ರಿಕ್ಷಾ ಮೀಟರ್ ದರ ಪರಿಷ್ಕರಿಸಿ ಕಿ.ಮೀ.ಗೆ ಕನಿಷ್ಠ 35 ರೂ. ಜಾರಿಗೊಳಿಸಲಾಗಿದೆ. ನಗರ ರಿಕ್ಷಾಗಳಿಗೆ ವಲಯ 1 ನೀಲಿ ಬಣ್ಣದ ಚೌಕಾಕೃತದಲ್ಲಿ ಹಾಗೂ ಗ್ರಾಮಾಂತರ ಭಾಗದ ರಿಕ್ಷಾಗಳಿಗೆ ವಲಯ 2 ಹಳದಿ ಬಣ್ಣದ ವೃತ್ತಾಕಾರದಲ್ಲಿ ವಲಯ ಕ್ರಮ ಸಂಖ್ಯೆ ಹಾಕುವುದು ಕಡ್ಡಾಯವಾಗಿದೆ. ಈ ಆದೇಶವನ್ನು ಶೀಘ್ರದಲ್ಲಿ ಜಾರಿಗೆ ತರಬೇಕೆಂದು ಜಿಲ್ಲಾಡಳಿತ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪಾಲಿಕೆಯು ನಗರದಲ್ಲಿ 210 ಆಟೋ ರಿಕ್ಷಾಗಳ ನೋಂದಣಿ ಮಾಡದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ನೋಂದಣಿ ಪ್ರಕ್ರಿಯೆಯನ್ನು ತಕ್ಷಣ ಜಾರಿಗೊಳಿಸಬೇಕು. ಜಿಲ್ಲೆಯ ರಿಕ್ಷಾ ಚಾಲಕರ ಸಂಘಗಳು ಸಾರಿಗೆ ಪ್ರಾಧಿಕಾರದ ಸಭೆಗಳಿಗೆ ಬಾರದೇ ಪ್ರಾಧಿಕಾರದ ನಿಯಮ ಮತ್ತು ನೀತಿಗಳ ತೀರ್ಮಾನಗಳ ವಿರುದ್ಧ ಜನಪ್ರತಿನಿಧಿಗಳ ಮೂಲಕ ಜಿಲ್ಲಾಡಳಿತಕ್ಕೆ ಒತ್ತಡ ತರುತ್ತಿದ್ದಾರೆ. ಇಂತಹ ಪ್ರಯತ್ನಗಳನ್ನು ನಾವು ಒಮ್ಮತದ ಹೋರಾಟದಿಂದ ಎದುರಿಸುತ್ತೇವೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version