ಪುತ್ರನ ಸಾವಿನ ದು:ಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
ಕೊಟ್ಟಿಗೆಹಾರ: ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಧನ್ಯ ಕುಮಾರ್ ಎಂಬವರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಧನ್ಯಕುಮಾರ್(37) ಅವರ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು.
ಎಷ್ಟೇ ಪ್ರಯತ್ನಪಟ್ಟರೂ ಧನ್ಯಕುಮಾರ್ ಅವರನ್ನು ಬದುಕಿಸಲು ಸಾಧ್ಯವಾಗಿರಲಿಲ್ಲ. ಆದರೆ ಧನ್ಯ ಕುಮಾರ್ ಅವರ ದೇಹದ ಇತರ ಭಾಗಗಳು ಸುರಕ್ಷಿತವಾಗಿದ್ದು, ಹೀಗಾಗಿ ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಸದ್ಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ. ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಧನ್ಯಕುಮಾರ್ ಅವರು, 4 ವರ್ಷದ ಮಗಳು, ಪತ್ನಿ, ತಂದೆ-ತಾಯಿಯನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka