ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ: ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ನಿಧನಕ್ಕೆ ಡಿ.ಕೆ.ಶಿವಕುಮಾರ್ ಸಂತಾಪ - Mahanayaka
1:00 AM Wednesday 27 - August 2025

ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ: ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ನಿಧನಕ್ಕೆ ಡಿ.ಕೆ.ಶಿವಕುಮಾರ್ ಸಂತಾಪ

d k shivakumar
30/08/2023


Provided by

ಮೈಸೂರು: ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

“ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ.

ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ