ಮತ್ತೆ ಅಮಾನುಷ: ಗಾಝಾ ಶಾಲೆಯ ಮೇಲೆ ಇಸ್ರೇಲ್ ದಾಳಿ; 100ಕ್ಕೂ ಹೆಚ್ಚು ಸಾವು
ಪೂರ್ವ ಗಾಝಾದಲ್ಲಿ ಸ್ಥಳಾಂತರಗೊಂಡ ಜನರ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಫೆಲೆಸ್ತೀನ್ ಸುದ್ದಿ ಸಂಸ್ಥೆ ವಾಫಾವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಹಮಾಸ್ ನಡೆಸುತ್ತಿರುವ ಗಾಝಾ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.
ಫಜ್ರ್ (ಮುಂಜಾನೆ) ಪ್ರಾರ್ಥನೆ ಮಾಡುವಾಗ ಸ್ಥಳಾಂತರಗೊಂಡ ಜನರನ್ನು ಗುರಿಯಾಗಿಸಿಕೊಂಡು ಇಸ್ರೇಲಿ ದಾಳಿಗಳು ನಡೆದವು. ಇದು ಸಾವುನೋವುಗಳ ಸಂಖ್ಯೆಯಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಯಿತು ಎಂದು ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಹಿಂದಿನ ವಾರದಲ್ಲಿ ಗಾಝಾದಾದ್ಯಂತ ನಾಲ್ಕು ಶಾಲೆಗಳ ಮೇಲೆ ದಾಳಿ ನಡೆದ ನಂತರ ಈ ಹೊಸ ದಾಳಿಗಳು ನಡೆದಿವೆ.
ಆಗಸ್ಟ್ 4 ರಂದು ಗಾಜಾ ನಗರದಲ್ಲಿ ಸ್ಥಳಾಂತರಗೊಂಡ ಜನರಿಗೆ ಆಶ್ರಯ ತಾಣಗಳಾಗಿ ಸೇವೆ ಸಲ್ಲಿಸುತ್ತಿದ್ದ ಎರಡು ಶಾಲೆಗಳು ಇಸ್ರೇಲಿ ದಾಳಿಯಿಂದ ಹಾನಿಗೊಳಗಾದವು. 30 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಹಿಂದಿನ ದಿನ ಗಾಜಾ ನಗರದ ಹಮಾಮಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 17 ಜನರು ಸಾವನ್ನಪ್ಪಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth