ದುರಂತ: ಬಸ್ ಪಲ್ಟಿ: 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

08/07/2024
ಪಂಚಕುಲ ಜಿಲ್ಲೆಯ ಪಿಂಜೋರ್ ಬಳಿ ಹರಿಯಾಣ ರಸ್ತೆ ಸಾರಿಗೆ ಬಸ್ ವೊಂದು ಪಲ್ಟಿಯಾದ ಪರಿಣಾಮ 40 ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಬಸ್ ಚಾಲಕನ ಅತಿಯಾದ ವೇಗದಿಂದಾಗಿ ಈ ಅಪಘಾತ ಸಂಭವಿಸಿದೆ.
ಜಿಲ್ಲೆಯ ನೌಲ್ಟಾ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಪಿಂಜೋರ್ ಆಸ್ಪತ್ರೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ಕರೆತರಲಾಗಿದೆ.
ಈ ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಗಂಭೀರ ಸ್ಥಿತಿಯಲ್ಲಿ ಚಂಡೀಗಢದ ಪಿಜಿಐಗೆ ಕಳುಹಿಸಲಾಗಿದೆ.
ಈ ಘಟನೆಯ ಬಗ್ಗೆ ತನಿಖೆ ನಡೆಸಲು ಪೊಲೀಸರು ಅಪಘಾತದ ಸ್ಥಳಕ್ಕೆ ಆಗಮಿಸಿದರು. ಬಸ್ ನ ಓವರ್ ಲೋಡ್ ಮತ್ತು ರಸ್ತೆಯ ಕೆಟ್ಟ ಸ್ಥಿತಿಯೂ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth