ಭಾರತೀಯ ವಿಮಾನಗಳಿಗೆ ಬಾಂಬ್ ಬೆದರಿಕೆ: 15 ದಿನಗಳಲ್ಲಿ 410 ವಿಮಾನಗಳು ಟಾರ್ಗೆಟ್

ಭಾರತದಲ್ಲಿ ಕಾರ್ಯನಿರ್ವಹಿಸುವ 60 ಕ್ಕೂ ಹೆಚ್ಚು ವಿಮಾನಗಳಿಗೆ ಸೋಮವಾರ ಬಾಂಬ್ ಬೆದರಿಕೆಗಳು ಬಂದಿವೆ. ಅದರಲ್ಲಿ ಕೇವಲ 15 ದಿನಗಳಲ್ಲಿ 410 ಕ್ಕೂ ಹೆಚ್ಚು ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು ಬಂದಿದೆ. ಈ ಬೆದರಿಕೆಗಳಲ್ಲಿ ಹೆಚ್ಚಿನವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಂದಿರುವಂತದ್ದು. ಇದು ಭದ್ರತಾ ಕಾಳಜಿ ಬಗ್ಗೆ ಪ್ರಶ್ನೆ ಮಾಡುವಂತೆ ಬಂದಿದೆ.
ಆಂತರಿಕ ಮೂಲಗಳ ಪ್ರಕಾರ ಸೋಮವಾರವಷ್ಟೇ, ಏರ್ ಇಂಡಿಯಾ ಮತ್ತು ಇಂಡಿಗೊದ ತಲಾ 21 ವಿಮಾನಗಳು ಮತ್ತು ಸುಮಾರು 20 ವಿಸ್ತಾರಾ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಏರ್ ಇಂಡಿಯಾ ವಕ್ತಾರರು ಭದ್ರತಾ ಕಾಳಜಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, “ಬೆದರಿಕೆಗಳು ಬಂದಾಗ ಸಂಬಂಧಿತ ಅಧಿಕಾರಿಗಳನ್ನು ತಕ್ಷಣವೇ ಎಚ್ಚರಿಸಲಾಯಿತು ಮತ್ತು ನಿಯಂತ್ರಕ ಅಧಿಕಾರಿಗಳ ಮಾರ್ಗದರ್ಶನದ ಪ್ರಕಾರ ಎಲ್ಲಾ ಭದ್ರತಾ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಯಿತು” ಎಂದು ಹೇಳಿದರು.
ಸುಳ್ಳು ಬೆದರಿಕೆಗಳ ಮಧ್ಯೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸೂಕ್ತ ಜಾಗರೂಕತೆಯಿಂದ ವೀಕ್ಷಿಸಲು ಸೂಚಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth