ಕ್ಲಾಸ್ ರೂಮ್ ಗೆ ನುಗ್ಗಿ ಗುಂಡಿನ ಮಳೆ ಸುರಿಸಿದ ಹೈಸ್ಕೂಲ್ ವಿದ್ಯಾರ್ಥಿ: 3 ಮಂದಿ ಸಾವು, 6 ಜನರಿಗೆ ಗಾಯ - Mahanayaka

ಕ್ಲಾಸ್ ರೂಮ್ ಗೆ ನುಗ್ಗಿ ಗುಂಡಿನ ಮಳೆ ಸುರಿಸಿದ ಹೈಸ್ಕೂಲ್ ವಿದ್ಯಾರ್ಥಿ: 3 ಮಂದಿ ಸಾವು, 6 ಜನರಿಗೆ ಗಾಯ

oxford high school
01/12/2021


Provided by

ಅಮೆರಿಕ: ಆಕ್ಸ್ ಫರ್ಡ್ ಹೈಸ್ಕೂಲ್ ನ ವಿದ್ಯಾರ್ಥಿಯೋರ್ವ ರಿವಾಲ್ವರ್ ನಿಂದ ಗುಂಡು ಹಾರಿಸಿ, ಮೂವರು ವಿದ್ಯಾರ್ಥಿಗಳನ್ನು ಹತ್ಯೆ ಗೈದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಶಿಕ್ಷಕ ಸೇರಿದಂತೆ ಇತರ 6 ಮಂದಿ ಗಾಯಗೊಂಡಿದ್ದಾರೆ.

ದಾಳಿ ನಡೆಸಿದ ಬಾಲಕ 15 ವರ್ಷ ವಯಸ್ಸಿನವನಾಗಿದ್ದು, ದಾಳಿಕೋರ ವಿದ್ಯಾರ್ಥಿ 15ರಿಂದ 20 ಗುಂಡುಗಳನ್ನು ಹಾರಿಸಿದ್ದಾನೆ. ಆದರೆ, ದಾಳಿಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ ಎಂದು ಇಲ್ಲಿನ ಅಧಿಕಾರಿ ಓಕ್ಲಾಂಡ್ ಕೌಂಟಿ ಅಂಡರ್ ಶರೀಫ್ ಮೈಕ್ ಮೆಕಾಬೆ ತಿಳಿಸಿದ್ದಾರೆ.

ಇನ್ನೂ ಗಾಯಾಳುಗಳ ಪೈಕಿ 6 ಮಂದಿಯ ಆರೋಗ್ಯ ಸ್ಥಿರವಾಗಿದೆ. ಈ ಪೈಕಿ ಇಬ್ಬರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಸದ್ಯ ದಾಳಿಕೋರ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತನಿಂದ ಅರೆ ಸ್ವಯಂಚಾಲಿತ ಹ್ಯಾಂಡ್ ಗನ್ ವಶಪಡಿಸಿಕೊಳ್ಳಲಾಗಿದೆ ಎಂದು  ಮೈಕೆಲ್ ಮೆಕ್ಯೂಬ್ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನವದಂಪತಿಗಳಿಂದ ಬಂಗಾಡಿ ಬೀಡಿಗೆ ವೀಳ್ಯದೆಲೆ ಸಮರ್ಪಣೆ: ತುಳುನಾಡಿನ ಅವಳಿ ವೀರರು ಕಾನದ—ಕಟದರು | ಸಂಚಿಕೆ: 08

ದನ ಸಾಗಾಟದ ವಾಹನ ಡಿಕ್ಕಿಯಾಗಿ ಯುವಕರಿಗೆ ಗಾಯ ಪ್ರಕರಣ: ಗಾಯಾಳುಗಳನ್ನು ಭೇಟಿಯಾದ ಸಚಿವ ಅರಗ ಜ್ಞಾನೇಂದ್ರ

500 ಕೊಟ್ರೆ 6 ಗಂಟೆ, 3 ಸಾವಿರ ಕೊಟ್ರೆ 1 ಗಂಟೆಯಲ್ಲಿ ಕೊವಿಡ್ ರಿಪೋರ್ಟ್ | ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರಿಸ್ಥಿತಿ ಏನು?  

ವೈದ್ಯನ ಟಿಕ್ ಟಾಕ್ ಹುಚ್ಚು | ತಾಳ್ಮೆ ಕಳೆದುಕೊಂಡ ರೋಗಿ; ಕೆಲಸ ಕಳೆದುಕೊಂಡ ವೈದ್ಯ

ಎಲ್ ಪಿಜಿ ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಸಿಲಿಂಡರ್ ಗಳ ಬೆಲೆ 103.50ಕ್ಕೆ ಏರಿಕೆ

ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ

ಇತ್ತೀಚಿನ ಸುದ್ದಿ