ಪಿ.ಡೀಕಯ್ಯ ನಿಗೂಢ ಸಾವು ಪ್ರಕರಣ: ಸಿಒಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ - Mahanayaka
12:28 AM Sunday 15 - December 2024

ಪಿ.ಡೀಕಯ್ಯ ನಿಗೂಢ ಸಾವು ಪ್ರಕರಣ: ಸಿಒಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

dikayya
06/11/2022

ಬೆಳ್ತಂಗಡಿ: ಹಿರಿಯ ದಲಿತ ನಾಯಕ , ಬಹುಜನ ಚಳವಳಿಯ ನೇತಾರ, ಬಿಎಸ್ ಎನ್ ಎಲ್ ನಿವೃತ್ತ ಉದ್ಯೋಗಿ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಕಳೆದ ಜುಲೈ 6 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ.ಡೀಕಯ್ಯರವರು ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ಬಿದಿದ್ದವರನ್ನು  ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು. ಜುಲೈ 8 ರಂದು ನಿಧನರಾಗಿದ್ದರು. ಮನೆಯವರ ಒಪ್ಪಿಗೆಯಂತೆ ಅಂಗಾಂಗಗಳ ದಾನ ಮಾಡಿದ ಬಳಿಕ ಜುಲೈ 9 ರಂದು ಬೆಳ್ತಂಗಡಿಯಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬೌದ್ಧ ಧರ್ಮದ ಪ್ರಕಾರ ಹುಟ್ಟೂರು ತಾಲೂಕಿನ ಕಣಿಯೂರು ಗ್ರಾಮದ ಪೊಯ್ಯದಲ್ಲಿ ಧಪನ ಕಾರ್ಯ ನಡೆದಿತ್ತು.

ಬಳಿಕ ಜುಲೈ 15 ರಂದು ಪಿ.ಡೀಕಯ್ಯ ಅವರ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಿದರು‌. ಈ ಭಾಗವಾಗಿ ಜುಲೈ 18 ರಂದು ಬೆಳ್ತಂಗಡಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಮೃತದೇಹವನ್ನು ಹೊರತೆಗೆದು ಜಿಲ್ಲೆಯ ವೈದ್ಯಾಧಿಕಾರಿಗಳ ತಂಡದ ಜೊತೆಗೆ ಶವ ಪರೀಕ್ಷೆ ಮಾಡಲಾಗಿತ್ತು ‌.

ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಬೆಳ್ತಂಗಡಿ ಪೋಲಿಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದರು.  ಈ ಮಧ್ಯೆ ಡೀಕಯ್ಯ ಅವರು ಕುಟುಂಬಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಒಡಿ ತನಿಖೆಗೆ ಒತ್ತಾಯಿಸಿದ್ದರು.

ಇದೀಗ ನವೆಂಬರ್ 4 ರಂದು ಘಟನೆಯ ಬಗ್ಗೆ ರಾಜ್ಯ ಸರ್ಕಾರ ಸಿಒಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೋಲಿಸ್ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಒಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ. ಒಟ್ಟಾರೆ ಇಡೀ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ