ಪಿ.ಡೀಕಯ್ಯ ಅವರ ಅಸಹಜ ಸಾವು ಪ್ರಕರಣ: ಪ್ರಕರಣದ ತನಿಖೆ ಆರಂಭಿಸಿದ ಸಿಐಡಿ - Mahanayaka
12:54 AM Thursday 28 - August 2025

ಪಿ.ಡೀಕಯ್ಯ ಅವರ ಅಸಹಜ ಸಾವು ಪ್ರಕರಣ: ಪ್ರಕರಣದ ತನಿಖೆ ಆರಂಭಿಸಿದ ಸಿಐಡಿ

p dikaiha
23/12/2022


Provided by

ಬೆಳ್ತಂಗಡಿ: ಹಿರಿಯ ದಲಿತ ಮುಖಂಡರಾಗಿದ್ದ ಪಿ.ಡೀಕಯ್ಯ ಅವರ ಅಸಹಜ ಸಾವಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ.

ಸಿಐಡಿ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದು ಬೆಳ್ತಂಗಡಿ ಠಾಣೆಯಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ಕಳೆದ ಜುಲೈ 6ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಡೀಕಯ್ಯ ಅವರು ಕುಸಿದು ಬಿದ್ದು ಗಾಯಗೊಂಡಿದ್ದರು. ಜುಲೈ 8ರಂದು ಅವರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರ ಅಂತ್ಯ ಸಂಸ್ಕಾರ ಪದ್ಮುಂಜದ ಮನೆಯಲ್ಲಿ ನಡೆದಿತ್ತು.

ಇದಾದ ಬಳಿಕ ಡೀಕಯ್ಯ ಅವರ ಸಹೋದರಿಯರು ಹಾಗೂ ಮನೆಯವರು ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಜು.15ರಂದು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಜು.18ರಂದು ಅವರ ಮೃತದೇಹವನ್ನು ಮೇಲೆತ್ತಿ ಮತಣೋತ್ತರ ಪರೀಕ್ಷೆಯನ್ನು ನಡೆಸಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತನಿಖೆ ಆರಂಭಿಸಿದ್ದರು. ಈ‌ ನಡುವೆ ಮನೆಯವರು ಸಿಐಡಿ ತನಿಖೆಗೆ ಆಗ್ರಹಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು ಸರಕಾರ ತನಿಖೆಯನ್ನು ಸಿಐಡಿಗೆ ವಹಿಸಿದ್ದರು.

ಇದೀಗ ಸಿಐಡಿ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದು, ಪ್ರಕರಣದ ಮಾಹಿತಿಗಳನ್ನು ಬೆಳ್ತಂಗಡಿ ಪೊಲೀಸರಿಂದ ಪಡೆದುಕೊಂಡಿದ್ದು ಘಟನೆ ನಡೆದ ಮನೆಗೆ ತೆರಳಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಬಗ್ಗೆ ಹೆಚ್ವಿನ ಮಾಹಿತಿಗಳೇನಾದರೂ ತನಿಖೆಯಿಂದ ಹೊರಬರುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ