ಪಾದಚಾರಿಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಪರಾರಿ: ವ್ಯಕ್ತಿ ಸಾವು - Mahanayaka

ಪಾದಚಾರಿಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಪರಾರಿ: ವ್ಯಕ್ತಿ ಸಾವು

belthangady
11/10/2022

ಬೆಳ್ತಂಗಡಿ:  ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಧರ್ಮಸ್ಥಳ ಶಾಂತಿವನದ ಸಮೀಪ ನಡೆದಿದೆ.


Provided by
Provided by
Provided by
Provided by
Provided by
Provided by
Provided by

ಅಪಘಾತಕ್ಕೀಡಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದು ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ 50ರಿಂದ 60ವರ್ಷ ಪ್ರಾಯದ ವ್ಯಕ್ತಿಯಾಗಿದ್ದು, ಅವರ  ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಡಿಕ್ಕಿ ಹೊಡೆದ ವಾಹನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ವಾಹನದ ಬಗ್ಗೆಯೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ