ಎಸ್ ಸಿ-ಎಸ್ ಟಿ ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ಈ ಸುದ್ದಿ ಓದಿ - Mahanayaka

ಎಸ್ ಸಿ-ಎಸ್ ಟಿ ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ಈ ಸುದ್ದಿ ಓದಿ

22/10/2020


Provided by

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

2020-21 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ. 15,000/- ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಉಪ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, ಎರಡನೇ ಮಹಡಿ, ಸಂಖ್ಯೆ 17, ಭಗವಾನ್ ಮಹಾವೀರ ರಸ್ತೆ, (ಇನ್ಫೆಂಟ್ರಿ ರಸ್ತೆ ) ಬೆಂಗಳೂರು – 560 001. ಈ ವಿಳಾಸಕ್ಕೆ ನವೆಂಬರ್ 10, 2020 ರೊಳಗಾಗಿ ಸಲ್ಲಿಸಬೇಕು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22028059 ಅಥವಾ 22863795 ಹಾಗೂ ಇ-ಮೇಲ್ : diprbangaloreurban@gmail.com ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ