ಪಹಲ್ಗಾಮ್ ಭಯೋತ್ಪಾದಕ ದಾಳಿ: ಮಂಜುನಾಥ ರಾವ್ ಅಂತ್ಯಸಂಸ್ಕಾರ - Mahanayaka
9:25 PM Wednesday 21 - January 2026

ಪಹಲ್ಗಾಮ್ ಭಯೋತ್ಪಾದಕ ದಾಳಿ: ಮಂಜುನಾಥ ರಾವ್ ಅಂತ್ಯಸಂಸ್ಕಾರ

manjunath
24/04/2025

ಶಿವಮೊಗ್ಗ:    ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ರಾವ್ ಮೃತದೇಹಕ್ಕೆ ಅವರ ನಿವಾಸದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರುತ್ತಿವೆ.

ಇಂದು ಬೆಳಗ್ಗೆ ಮಂಜುನಾಥ್ ಮೃತದೇಹ ಶಿವಮೊಗ್ಗ ತಲುಪಿದ್ದು, ಸರ್ಕಾರದ ಪರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಸಹ ಮಂಜುನಾಥ್ ರಾವ್ ಅಂತಿಮ ದರ್ಶನ ಪಡೆದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ದಾರುಣವಾಗಿ ಮೃತಪಟ್ಟಿರುವ ಮಂಜುನಾಥ ರಾವ್ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಇಂದು ಶಿವಮೊಗ್ಗದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಅರ್ಧ ದಿನ ಸ್ವಯಂಪ್ರೇರಿತ ಬಂದ್ ನಡೆಸಲಾಗುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ