ಪಹಲ್ಗಾಮ್‌ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನು ಕಳುಹಿಸಿದ ಸಿಎಂ ಸಿದ್ದರಾಮಯ್ಯ - Mahanayaka
4:59 PM Wednesday 21 - January 2026

ಪಹಲ್ಗಾಮ್‌ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನು ಕಳುಹಿಸಿದ ಸಿಎಂ ಸಿದ್ದರಾಮಯ್ಯ

siddaramaiah
22/04/2025

ಬೆಂಗಳೂರು: ಜಮ್ಮು–ಕಾಶ್ಮೀರದ ಪಹಲ್ಗಾಮ್‌ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್​ ಮೃತಪಟ್ಟಿದ್ದಾರೆ.

ಈ ಮಾಹಿತಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತೆರಳಿದ್ದು, ಈ ತಂಡ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಮುಂದಾಗಲಿದೆ.

ಕನ್ನಡಿಗರನ್ನ ವಾಪಸ್​ ತರಲು ಎಲ್ಲ ಕ್ರಮಕೈಗೊಳ್ತೇವೆ. ಒಟ್ಟು 15 ಜನ ಸಿಲುಕಿರುವ ಮಾಹಿತಿ ಇದೆ, ಸಹಾಯವಾಣಿ ತೆರೆಯುವ ಕಾರ್ಯ ಮಾಡುವುದಾಗಿ ಕಾನೂನು ಸಚಿವ ಹೆಚ್​.ಕೆ.ಪಾಟೀಲ್​ ಮಾಹಿತಿ ನೀಡಿದ್ದಾರೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ,  ಮೃತ ಮಂಜುನಾಥ್​ ಅವರ ಪತ್ನಿ ಪಲ್ಲವಿಯವರನ್ನು ಸಂಪರ್ಕಿಸಲಾಗಿದೆ. ಮಂಜುನಾಥ್ ಮೃತದೇಹ ಬೆಟ್ಟದ ಮೇಲಿರುವುದರಿಂದ, ಮೃತದೇಹ ಕೆಳಗೆ ತರಲು ಅಧಿಕಾರಿಗಳ ಜತೆ ಸಂಪರ್ಕ ಮಾಡಿದ್ದೇನೆ. ಅಲ್ಲಿನ ಸ್ಥಳೀಯ ಅಧಿಕಾರಿಗಳನ್ನ ಸಂಪರ್ಕ ಮಾಡಿದ್ದೇವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವ ಬಗ್ಗೆ ಮಾಹಿತಿ ಇದೆ. ಮಂಜುನಾಥ್​ ಅವರ ಶವ ತರಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ