ಏಷ್ಯಾದಲ್ಲೇ ಪಾಕಿಸ್ತಾನದಲ್ಲಿ ಅತೀ ಹೆಚ್ಚು ಸ್ತನ ಕ್ಯಾನ್ಸರ್ ರೋಗಿಗಳು
ಏಷ್ಯಾದಲ್ಲಿಯೇ ಪಾಕಿಸ್ತಾನದ ಮಹಿಳೆಯರು ಅತೀ ಹೆಚ್ಚು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಪಾಕಿಸ್ತಾನದ ಪ್ರತಿ 10 ಮಹಿಳೆಯರ ಪೈಕಿ ಒಬ್ಬರಲ್ಲಿ ಸ್ತನ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಸರಾಸರಿ 90 ಸಾವಿರ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ, 40 ಸಾವಿರ ಜನರು ಸ್ತನ ಕ್ಯಾನ್ಸರ್ ನಿಂದ ಸಾವಿಗೀಡಾಗುತ್ತಿದ್ದಾರೆ.
ಸ್ತನ ಕ್ಯಾನ್ಸರ್ ವಿರುದ್ಧ ಪಾಕಿಸ್ತಾನದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಭಾನುವಾರ ಆಯೋಜಿಸಲಾಗಿರುವ ಜಾಗೃತಿ ಕಾರ್ಯಕ್ರಮದಲ್ಲಿ ಈ ಅಂಕಿ ಅಂಶಗಳನ್ನು ನೀಡಲಾಗಿದೆ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.
ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಸಲಹೆಗಾರ್ತಿ ಫೌಜಿಯಾ ನಸ್ರೀನ್, ಸ್ತನ ಕ್ಯಾನ್ಸರ್ ಬಗ್ಗೆ ಮಹಿಳೆಯರು ತಮ್ಮನ್ನು ತಾವು ಸುಶಿಕ್ಷಿತರಾಗಿಸಬೇಕು ಎಂಬ ವಿಚಾರವನ್ನು ಒತ್ತಿ ಹೇಳಿದರು. ಇದಲ್ಲದೇ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ, ಸೂಕ್ತ ಸೌಲಭ್ಯಗಳು ಮತ್ತು ಕುಟುಂಬದ ಬೆಂಬಲ ಸ್ತನ ಕ್ಯಾನ್ಸರ್ ಹೋಗಲಾಡಿಸಲು ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದರು.