ಚುನಾವಣೆಯಲ್ಲಿ ಆಗಿದ್ಯಂತೆ ಲೋಪ: ತಪ್ಪು ಒಪ್ಪಿ ರಾಜೀನಾಮೆ ನೀಡಿದ ಪಾಕಿಸ್ತಾನದ ಚುನಾವಣಾ ಅಧಿಕಾರಿ

17/02/2024

ಪಾಕಿಸ್ತಾನದ ಚುನಾವಣೆಯಲ್ಲಿ ಆದ ಎಲ್ಲಾ ತಪ್ಪುಗಳ ಜವಾಬ್ದಾರಿಯನ್ನು ಹೊತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಮುಖ್ಯ ನ್ಯಾಯಮೂರ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇವರು ಇತ್ತೀಚಿನ ಚುನಾವಣೆಯಲ್ಲಿ ಚುನಾವಣಾ ರಿಗ್ಗಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಆರೋಪಿಸಿದ್ದಾರೆ.

ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಫೆಬ್ರವರಿ 8 ರಂದು ನಡೆದ ಚುನಾವಣೆಯಲ್ಲಿ ತನ್ನ ಜಯದ ಜನಾದೇಶವನ್ನು ರಿಗ್ಗಿಂಗ್ ಮೂಲಕ‌ ಕದಿಯುತ್ತಿರುವುದರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಪ್ರಾರಂಭಿಸಿದ ಬೆನ್ನಲ್ಲೇ ರಾವಲ್ಪಿಂಡಿಯ ಮಾಜಿ ಆಯುಕ್ತ ಲಿಯಾಕತ್ ಅಲಿ ಚಟ್ಟಾ ಅವರ ಈ ಹೇಳಿಕೆ ಬಂದಿದೆ.

ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಿಯಾಕತ್ ಅಲಿ ಚಟ್ಟಾ, ಚುನಾವಣೆಯಲ್ಲಿ ಸೋಲುತ್ತಿರುವ ಅಭ್ಯರ್ಥಿಗಳನ್ನು ಗೆಲ್ಲುವಂತೆ ಮಾಡಲಾಗಿದೆ ಎಂದು ಹೇಳಿದರು.

ಈ ಎಲ್ಲಾ ತಪ್ಪುಗಳ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಮುಖ್ಯ ನ್ಯಾಯಮೂರ್ತಿ ಕೂಡ ಇದರಲ್ಲಿ ಸಂಪೂರ್ಣವಾಗಿ ಭಾಗಿಯಾಗಿದ್ದಾರೆ ಎಂದು ನಿಮಗೆ ಹೇಳುತ್ತಿದ್ದೇನೆ” ಎಂದು ಅವರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶಗಳನ್ನು ತಿರುಚಿದ್ದಕ್ಕಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಲಿಯಾಕತ್ ಅಲಿ ಚಟ್ಟಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಅದು ಹೇಳಿದೆ.

ಇತ್ತೀಚಿನ ಸುದ್ದಿ

Exit mobile version