ಪಾಕಿಸ್ತಾನದ ವಾಯು ನೆಲೆ ಮೇಲೆ ಭಾರತದ ಕ್ಷಿಪಣಿ ದಾಳಿ ನಡೆಸಿದ್ದು ನಿಜ: ಕೊನೆಗೂ ಸತ್ಯ ಬಾಯ್ಬಿಟ್ಟ ಪಾಕ್ ಪ್ರಧಾನಿ - Mahanayaka
9:26 PM Saturday 18 - October 2025

ಪಾಕಿಸ್ತಾನದ ವಾಯು ನೆಲೆ ಮೇಲೆ ಭಾರತದ ಕ್ಷಿಪಣಿ ದಾಳಿ ನಡೆಸಿದ್ದು ನಿಜ: ಕೊನೆಗೂ ಸತ್ಯ ಬಾಯ್ಬಿಟ್ಟ ಪಾಕ್ ಪ್ರಧಾನಿ

Shehbaz Sharif
17/05/2025

ಇಸ್ಲಾಮಾಬಾದ್: ಮೇ 10 ರಂದು ಭಾರತದ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಸ್ಥಳಗಳನ್ನು ನಾಶಪಡಿಸಿದೆ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಒಪ್ಪಿಕೊಂಡಿದ್ದಾರೆ,


Provided by

ಮೇ 9 ಮತ್ತು 10ರ ನಡುವಿನ ರಾತ್ರಿ 2:30ಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ಮಾಡಿ ಈ ಮಾಹಿತಿ ನೀಡಿದ್ದಾಗಿ ಷರೀಫ್ ಬಹಿರಂಗಪಡಿಸಿದ್ದಾರೆ.

ಇದುವರೆಗೂ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು ಪಾಕಿಸ್ತಾನ ನಿರಾಕರಿಸುತ್ತಾ ಬಂದಿತ್ತು. ಪಾಕ್ ಪ್ರಧಾನಿ ಈ ಹೇಳಿಕೆ ನೀಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಸ್ಲಾಮಾಬಾದ್ ಪಾಕಿಸ್ತಾನ ಸ್ಮಾರಕದಲ್ಲಿ ನಡೆದ ವಿಶೇಷ “ಯೂಮ್—ಇ–ತಷ್ಕರ್’ ಸಮಾರಂಭದಲ್ಲಿ ಷರೀಫ್ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಮೇ 9–10ರ ಮಧ್ಯರಾತ್ರಿ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಅವರು ಕರೆ ಮಾಡಿ, ಹಿಂದೂಸ್ತಾನಿ ಸಿಡಿತಲೆ ಕ್ಷಿಪಣಿ ನೂರ್ ಖಾನ್ ವಾಯುನೆಲೆ ಮತ್ತು ಇತರ ಪ್ರದೇಶಗಳಿಗೆ ಅಪ್ಪಳಿಸಿದೆ ಎಂದು ಮಾಹಿತಿ ನೀಡಿದರು. ಆದರೆ, ಜನರಲ್ ಅವರ ಧ್ವನಿಯಲ್ಲಿ ವಿಶ್ವಾಸ, ಆತ್ಮವಿಶ್ವಾಸ ಮತ್ತು ರಾಷ್ಟ್ರಪ್ರೇಮ ಇತ್ತು ಎನ್ನುವುದನ್ನು ನಾನು ದೇವರ ಮೇಲೆ ಪ್ರಮಾಣ ಮಾಡಿ ಹೇಳಬಲ್ಲೆ ಎಂದಿದ್ದಾರೆ.

ನಮ್ಮ ವಾಯುಪಡೆ ನಮ್ಮ ದೇಶವನ್ನು ರಕ್ಷಿಸಿಕೊಳ್ಳಲು ದೇಶಿ ತಂತ್ರಜ್ಞಾನವನ್ನು ಬಳಸಿದೆ, ಆದರೆ, ಅವರು ಅತ್ಯಾಧುನಿಕ ಸಾಧನ ಸಲಕರಣೆಗಳು ಮತ್ತು ತಂತ್ರಜ್ಞಾನವನ್ನು ಚೀನಿ ಜೆಟ್ ಗಳ ಮೇಲೆ ಬಳಸಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.

ಬಳಿಕ ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಡಿಜಿಎಂಒ ಮಟ್ಟದ ಮಾತುಕತೆಯಲ್ಲಿ ಯುದ್ಧವನ್ನು ಕೊನೆಗೊಳಿಸಲು ಒಪ್ಪಿಕೊಂಡಿದ್ದವು. ಈಗ ಎರಡೂ ದೇಶಗಳು ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ನಿರ್ಧರಿಸಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ