ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ: ಭಾರತೀಯ ಸೇನೆ - Mahanayaka

ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ: ಭಾರತೀಯ ಸೇನೆ

12/05/2025

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಂದರ್ಭದಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಇಂದು ಅಧಿಕೃತವಾಗಿ ಭಾರತೀಯ ಸೇನೆ ತಿಳಿಸಿದೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ  ಇಂದು ಮಧ್ಯಾಹ್ನ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಹಿರಿಯ ಕಮಾಂಡರ್‌ ಸಮಗ್ರ ವಿವರವನ್ನು ಬಿಡುಗಡೆಗೊಳಿಸಿದರು.

ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.

ಆಪರೇಷನ್ ಸಿಂಧೂರ್ ಸುಮಾರು 25 ನಿಮಿಷಗಳ ಕಾಲ ನಡೆಯಿತು ಮತ್ತು ಮೇ 7 ರ ಮುಂಜಾನೆ ನಡೆಸಲಾಯಿತು. ಇದು ಒಂಬತ್ತು ದೃಢೀಕೃತ ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತು ಎಂದು ಅವರು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ