ನಡು ರಸ್ತೆಯಲ್ಲಿ ನಮಾಝ್: ಮಹಿಳೆಯ ಹುಚ್ಚಾಟಕ್ಕೆ ಸಾರ್ವಜನಿಕರು ಸುಸ್ತು: ಮಹಿಳೆಯ ವರ್ತನೆಕ್ಕೆ ಕಾರಣ ಏನು?
ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತ್ಯಂತ ಜನನಿಬಿಡ ಪ್ರದೇಶವಾದ ಐಎಂಎ ಜಂಕ್ಷನ್‌ನಲ್ಲಿ ಮಹಿಳೆಯೊಬ್ಬರು ನಡುರಸ್ತೆಯಲ್ಲೇ ನಮಾಜ್ ಮಾಡುವ ಮೂಲಕ ಹುಚ್ಚಾಟ ಪ್ರದರ್ಶಿಸಿರುವ ಘಟನೆ ನಡೆದಿದೆ.
ಘಟನೆಯ ವಿವರ: ವಾಹನ ಸಂಚಾರ ದಟ್ಟಣೆಯಿರುವ ರಸ್ತೆಯ ಮಧ್ಯೆ ಕುಳಿತು ನಮಾಜ್ ಮಾಡುತ್ತಿದ್ದ ಮಹಿಳೆಯಿಂದಾಗಿ ಸಂಚಾರಕ್ಕೆ ಅಡಚಣೆಯುಂಟಾಯಿತು. ಈ ದೃಶ್ಯಗಳನ್ನು ಕಂಡು ಸಾರ್ವಜನಿಕರು ಮತ್ತು ವಾಹನ ಸವಾರರು ಆತಂಕಕ್ಕೊಳಗಾದರು. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪಾಲಕ್ಕಾಡ್ ಸೌತ್ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.
ಮಹಿಳೆಯ ವರ್ತನೆಗೆ ಕಾರಣ: ಪೊಲೀಸ್ ವಿಚಾರಣೆಯ ವೇಳೆ ಮಹಿಳೆಯು ತನ್ನ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ್ದಾರೆ. “ತನ್ನ ಕುಟುಂಬದ ಆಸ್ತಿ ವಿಚಾರವಾಗಿ ವಿವಾದವಿದ್ದು, ಈ ಸಮಸ್ಯೆಯನ್ನು ಸಾರ್ವಜನಿಕರು ಮತ್ತು ಅಧಿಕಾರಿಗಳ ಗಮನಕ್ಕೆ ತರಲು ನಾನು ಈ ರೀತಿ ಪ್ರತಿಭಟನೆ ನಡೆಸಿದೆ” ಎಂದು ಅವರು ವಿವರಿಸಿದ್ದಾರೆ.
ಸದ್ಯ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























