ಮಹಿಳೆಗೆ ಪೆಟ್ರೋಲ್ ಸುರಿದು ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ | “ಪಾಳೆಗಾರಿಕೆ ಮನಸ್ಥಿತಿಯ ಕ್ರಿಮಿಗಳಿಗೆ  ಕಠಿಣ ಶಿಕ್ಷೆಯಾಗಲಿ” - Mahanayaka

ಮಹಿಳೆಗೆ ಪೆಟ್ರೋಲ್ ಸುರಿದು ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ | “ಪಾಳೆಗಾರಿಕೆ ಮನಸ್ಥಿತಿಯ ಕ್ರಿಮಿಗಳಿಗೆ  ಕಠಿಣ ಶಿಕ್ಷೆಯಾಗಲಿ”

surapura
05/10/2021

ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಮಾಸುವ ಮುನ್ನವೇ ಮತ್ತೇ ಅಂತದ್ದೇ ಹೇಯ ಕೃತ್ಯ ಸುರಪುರ ತಾಲೂಕಿನ ಚೌಡೇಶ್ವರಿಹಾಳದಲ್ಲಿ ನಡೆದಿದೆ.

ಉತ್ತರ ಪ್ರದೇಶ ಹಾಗೂ ಬಿಹಾರಗಳಲ್ಲಿ ಮಹಿಳೆಯರ ಮೇಲೆ ಇಂತಹ ಮೃಗೀಯ ವರ್ತನೆಗಳು ನಡೆಯುವುದು ವರದಿಯಾಗುತ್ತಿದ್ದವು. ಆದರೆ, ಈ ಹೇಯ ಕೃತ್ಯ ನಮ್ಮ ಜಿಲ್ಲೆಯಲ್ಲಿ ನಡೆದಿದೆ ಎನ್ನುವುದು ನಾಚಿಕೆಗೇಡಿನ‌ ಸಂಗತಿಯಾಗಿದೆ.

ಅಳ್ಳಳ್ಳಿ ಗ್ರಾಮದ ಗಂಗಪ್ಪ, ಬಸ್ಸಪ್ಪ ಮತ್ತು ಇತರರು ಸೇರಿ ದಲಿತ ಮಹಿಳೆಯ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ್ದಾರೆ. ಇದಕ್ಕೆ ಆಕೆ ಪ್ರತಿರೋಧ ತೋರಿಸಿದಾಗ ಅವಳ ಮೇಲೆ ಪೆಟ್ರೋಲ್  ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ದುಷ್ಕೃತ್ಯವನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನೂ ಖಂಡಿಸಬೇಕಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿ ತೀವ್ರವಾಗಿ ಬೆಳೆಯುತ್ತಿದೆ ಎನ್ನುವುದಕ್ಕೆ ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣವೇ ಸಾಕ್ಷಿಯಾಗಿದೆ.  ಈ ಪಾಳೇಗಾರಿಕೆ ಪದ್ದತಿಯಿಂದ ಸಾಮಾನ್ಯ ಜನ ಜೀವಭಯದಿಂದ ಬದುಕುವಂತಾಗಿದೆ.   ಇಂತಹ ಘಟನೆ  ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆಯೇ ಅಥವಾ ಪಾಳೇಗಾರಿಕೆ ವ್ಯವಸ್ಥೆಯಲ್ಲಿದ್ದೇವೆಯೇ ಎನ್ನುವ ಸಂಶಯ ಕಾಡದೆ ಇರದು.

ಪೈಶಾಚಿಕ ಕೃತ್ಯದ ಬಗ್ಗೆ ಪೋಲೀಸರು ದಕ್ಷತೆಯಿಂದ, ನಿಷ್ಪಕ್ಷಪಾತವಾಗಿ ನಡೆದುಕೊಂಡರೆ ಆರೋಪಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೆ ಇಲ್ಲ. ಆದರೆ ಇಲ್ಲಿಯೂ ರಾಜಕೀಯ ನುಸುಳಿದರೆ ಎಂಬ ಭಯ ನನ್ನನ್ನು ಕಾಡುತ್ತಿದೆ. ಭಾರತ ವಿಶ್ವಗುರುವಾಗುತ್ತದೆ ಎಂದು ಬೊಬ್ಬೆ ಹೊಡೆದು ಭಾಷಣ ಬಿಗಿಯುವ ರಾಜಕೀಯ ನಾಯಕರೆ, ಮೊದಲು ಮಹಿಳಾ ಸುರಕ್ಷತೆಗೆ ಆದ್ಯತೆ ನೀಡಿ ಆಮೇಲೆ ವಿಶ್ವ ಗುರಿವಿನ ಕನಸು ಕಾಣೋಣ.

– ಆರ್.ಎಸ್. ಮಾಲಗತ್ತಿ

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಪೊಲೀಸರ ಬದಲು ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ  | ಅನೈತಿಕ ಪೊಲೀಸ್ ಗಿರಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

75 ಯುವತಿಯರನ್ನು ಮದುವೆಯಾಗಿ, 200 ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡಿದ ಪಾಪಿ ಅರೆಸ್ಟ್!

ಆನಂದ್ ಸಿಂಗ್, ಕಂಪ್ಲಿ ಗಣೇಶ್ ಎಣ್ಣೆ ಏಟು:  ಕೊನೆಗೂ ಪ್ರಕರಣ ರಾಜಿಯಲ್ಲಿ ಇತ್ಯರ್ಥ

ರೈಲಿನಲ್ಲಿ ಅಪ್ರಾಪ್ತೆಗೆ ಮೇಲೆ ಲೈಂಗಿಕ ಕಿರುಕುಳ ನಡೆಸಿದವನಿಗೆ 5 ವರ್ಷ ಜೈಲು ಶಿಕ್ಷೆ

ನಿನ್ನೆ ವಿಶ್ವಾದ್ಯಂತ ಫೇಸ್ ಬುಕ್, ವಾಟ್ಸಾಪ್ ಗೆ ಏನಾಗಿತ್ತು?

ಬಿಜೆಪಿ ತನ್ನ ತಾಲಿಬಾನಿ‌ ಮನಸ್ಥಿತಿಯನ್ನು  ಬೆತ್ತಲು‌ ಮಾಡಿಕೊಂಡಿದೆ | ಯೋಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು

ಇತ್ತೀಚಿನ ಸುದ್ದಿ