ಹಕ್ಕಿ ಜ್ವರದ ಆತಂಕ: ಸತ್ತ ಕೋಳಿಗಳನ್ನು ಜಲಾಶಯದಲ್ಲಿ ಎಸೆದ ಕಿರಾತಕರು

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಕ್ಕಂಪಲ್ಲಿ ಜಲಾಶಯದಲ್ಲಿ ಹಕ್ಕಿ ಜ್ವರ ಹರಡುವ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ ನೂರಾರು ಸತ್ತ ಕೋಳಿಗಳನ್ನು ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳಿಗೆ ಪ್ರಮುಖ ಕುಡಿಯುವ ನೀರಿನ ಮೂಲವಾಗಿ ಕಾರ್ಯನಿರ್ವಹಿಸುವ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಗಳು ಸತ್ತ ಕೋಳಿಗಳನ್ನು ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ಶಂಕಿತರನ್ನು ಬಂಧಿಸಿದಾಗ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಲ್ಗೊಂಡ ಎಸ್ಪಿ ಶರತ್ ಚಂದ್ರ ತನಿಖೆ ಆರಂಭಿಸಿದ್ದು, ದೇವರಕೊಂಡ ಆರ್ಡಿಒ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj