1:07 AM Wednesday 22 - October 2025

ಫೋನ್ ಪೇ ಮಾಡ್ತೀನಿ ಎಂದು ಪಾನಿಪೂರಿ ವ್ಯಾಪಾರಿ ಖಾತೆಗೆ ಕನ್ನ: ಯುವಕನ ಬಂಧನ

panipuri
14/02/2023

ಚಾಮರಾಜನಗರ: ಉಂಡು ಹೋದ ಕೊಂಡು ಹೋದ ಎಂಬಂತೆ ಯುವಕನೋರ್ವ ಪಾನಿಪೂರಿ ತಿಂದಿದ್ದೂ ಅಲ್ಲದೇ ವ್ಯಾಪಾರಿಗೆ ಖಾತೆಗೆ ಕನ್ನ ಹಾಕಿದ್ದ ಯುವಕ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಬೆಂಗಳೂರು ಮೂಲದ ವಿಶಾಲ್ (19) ಬಂಧಿತ ಯುವಕ.‌ಸ್ನೇಹಿತರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಈತ ತನ್ನ ಬುದ್ಧಿವಂತಿಕೆ ತೋರಿ ವಂಚಿಸಿ ಕೊನೆಗೇ ಜೈಲುಪಾಲಾಗಿದ್ದಾನೆ. ಅಪರಿಚಿತರಿಗೆ ಫೋನ್ ಕೊಡುವ ಮುನ್ನ ಹಾಗೂ ಅವರಿವರ ಮುಂದೆ ಪಾಸ್ ವರ್ಡ್ ಒತ್ತುವ ಮುನ್ನ ಎಚ್ಚರಿಕೆ ಎಷ್ಟು ಅವಶ್ಯ ಎಂವುದಕ್ಕೆ ಈ ಸ್ಟೋರಿ ಓದಿ.

ಗೆಳೆಯರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಆರೋಪಿ ಯುವಕ ಕೊಳ್ಳೇಗಾಲದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿನ‌ ಲೋಕೇಶ್ ಎಂಬವರ ಪಾನಿಪೂರಿ ಅಂಗಡಿಗೆ ತೆರಳಿ ಸ್ನೇಹಿತರ ಜೊತೆ ಮೂರು ಪ್ಲೇಟ್ ಪಾನಿಪೂರಿ ತಿಂದಿದ್ದಾನೆ‌. ಹಣವನ್ನು ಫೋನ್ ಪೇ ಮಾಡುವುದಾಗಿ ಹೇಳಿ ವ್ಯಾಪಾರಿ ಫೋನ್ ಪಡೆದು ಬೇರೊಬ್ಬನಿಗೆ ಕರೆ ಮಾಡಿದ್ದಾನೆ. ಆತ ದುಡ್ಡು  ಕಳುಹಿಸಿದ್ದು ಒಮ್ಮೆ ಚೆಕ್ ಮಾಡಿ ಎಂದು ಹೇಳಿ ವ್ಯಾಪಾರಿ ಫೋನ್ ಪೇ  ತೆರೆಯುವಾಗ ಪಾಸ್ ವರ್ಡ್ ನೋಡಿಕೊಂಡಿದ್ದಾನೆ.

ಸ್ವಲ್ಪ ಸಮಯದ ಬಳಿಕ ನಿಮ್ಮ ಫೋನ್ ನಲ್ಲಿ ಸರ್ವರ್ ಸಮಸ್ಯೆ ಇದೆ, ಪರಿಶೀಲಿಸುವುದಾಗಿ ಫೋನ್ ಪಡೆದು 30 ಸಾವಿರ ರೂ.ವನ್ನು ತನ್ನ ಖಾತೆಗೆ ಕಳುಹಿಸಿಕೊಂಡು ಪಾನಿಪೂರಿ ಹಣ 120 ರೂ. ಕಳುಹಿಸಿ ಟೋಪಿ ಹಾಕಿದ್ದ. ಈ ಬಗ್ಗೆ ಕಳೆದ 11ರಂದು ಪ್ರಕರಣ ದಾಖಲಿಸಿಕೊಂಡ ಚಾಮರಾಜನಗರ ಸಿಇಎನ್ ಠಾಣೆ ಪಿಐ ಆನಂದ್ ಮತ್ತು ತಂಡ ಕಾರ್ಯಾಚರಣೆ ಕೈಗೊಂಡು 30 ಸಾವಿರ ರೂ. ಕಕ್ಕಿಸಿ ಪ್ರಕರಣ ಸುಖಾಂತ್ಯಗೊಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version