ಪುನೀತ್ ರಾಜ್ ಕುಮಾರ್ ಜೊತೆಗೆ ನಟಿಸಿದ್ದ ‘ಪಂಕಜಾ’ ನಟಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ - Mahanayaka
3:16 PM Wednesday 10 - December 2025

ಪುನೀತ್ ರಾಜ್ ಕುಮಾರ್ ಜೊತೆಗೆ ನಟಿಸಿದ್ದ ‘ಪಂಕಜಾ’ ನಟಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ

shefali jariwala
28/06/2025

ಪುನೀತ್ ರಾಜ್ ಕುಮಾರ್ ಅವರ ಜೊತೆಗೆ “ ನಾ ಬೋರ್ಡ್ ಇರದ ಬಸ್ ನು” ಹಾಡಿಗೆ ಸ್ಟೆಪ್ ಹಾಕಿದ್ದ ಪಂಕಜಾ ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

42 ವರ್ಷ ವಯಸ್ಸಿನ ನಟಿ ಶೆಫಾಲಿ ಜರಿವಾಲಾ ಮುಂಬೈನ ಅಂಧೇರಿ ಲೋಖಂಡ್ ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೂನ್ 27ರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಅವರು ಎದೆನೋವಿನಿಂದ ತೀವ್ರವಾಗಿ ಅಸ್ವಸ್ಥರಾಗಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜವಾಗಲಿಲ್ಲ.

ಪುನೀತ್ ರಾಜ್‌ಕುಮಾರ್ ಜೊತೆ ಹುಡುಗರು ಚಿತ್ರದಲ್ಲಿ ‘ನಾ ಬೋರ್ಡು ಇರದ ಬಸ್ಸನು’ ಹಾಡಿಗೆ ಶೆಫಾಲಿ ಮಸ್ತ್ ಆಗಿ ಕುಣಿದಿದ್ದರು. ಸದ್ಯ ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

1982ರ ಡಿಸೆಂಬರ್ 15ರಂದು ಜನಿಸಿದ ಶೆಫಾಲಿ ಮುಂಬೈನಲ್ಲಿ ಬೆಳೆದರು. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ಶೆಫಾಲಿ ವಿವಾಹವಾದರು. ಆ ಬಳಿಕ ಪತಿಯೊಂದಿಗೆ ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು. ಕಾಂತಾ ಲಗಾ ಹಾಡಿನ ಮೂಲಕ ನಟಿ ಫೇಮಸ್‌ ಆಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ