ಕಾಫಿನಾಡಿನಲ್ಲಿ ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ
ಕೊಟ್ಟಿಗೆಹಾರ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಂದು ಪುಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.
ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಸಿಕ್ಕಿದ್ದು, ಈ ಮೂಲಕ ಎರಡು ಪುಂಡಾನೆಗಳನ್ನು ಸೆರೆ ಹಿಡಿದಂತಾಗಿದೆ.
ಕಳೆದ ಮೂರು ತಿಂಗಳಲ್ಲಿ ಮೂವರನ್ನು ಕಾಡಾನೆಗಳು ಬಲಿ ಪಡೆದಿದ್ದವು. ಈ ಹಿನ್ನೆಲೆಯಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು.
ಐದು ದಿನಗಳ ಹಿಂದೆ ಒಂದು ಆನೆಯನ್ನು ಕುಂಡ್ರ ಗ್ರಾಮದಲ್ಲಿ ಹಿಡಿಯಲು ಅರಣ್ಯ ಇಲಾಖೆಯಶಸ್ವಿಯಾಗಿತ್ತು.
5 ಸಾಕಾನೆಗಳಿಂದ ಸತತ ಕಾರ್ಯಾಚರಣೆ ನಡೆಸ್ತಿದ್ದ ಅರಣ್ಯ ಇಲಾಖೆ ಇದೀಗ ಮತ್ತೊಂದು ಪುಂಡಾನೆಗಾಗಿ ಕಾರ್ಯಾಚರಣೆ ಮುಂದುವರಿಸಿದೆ.ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿ ನಾಡಿಗರು ನಿಟ್ಟುಸಿರು ಬಿಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























