ಈ ರಾಜ್ಯದ 1ರಿಂದ 8ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪಾಸ್ ಮಾಡಲು ಆದೇಶ - Mahanayaka

ಈ ರಾಜ್ಯದ 1ರಿಂದ 8ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪಾಸ್ ಮಾಡಲು ಆದೇಶ

school
03/04/2021

ಮುಂಬೈ: ಪರೀಕ್ಷೆ ನಡೆಸದೆ ಒಂದರಿಂದ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಮಹಾರಾಷ್ಟ್ರ ಸರ್ಕಾರ ಪಾಸ್ ಮಾಡಿದೆ. ಈ ಬಗ್ಗೆ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊವಿಡ್ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಂಡು ಶಿಕ್ಷಣ ಸಚಿವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ಒಂದರಿಂದ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ. 9 ಮತ್ತು 11 ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೆ, ಬೇಡವೇ ಎಂಬುದರ ಕುರಿತಾಗಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಪ್ರಕಟವಾದ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಸರ್ಕಾರ ತಿಳಿಸಿದೆ.

ಇತ್ತೀಚಿನ ಸುದ್ದಿ