ಪರೀಕ್ಷೆಗೆ ಓದುತ್ತಿದ್ದ ವೇಳೆ ಟೆರೆಸ್ ನಿಂದ ಬಿದ್ದು ವಿದ್ಯಾರ್ಥಿ ಸಾವು - Mahanayaka

ಪರೀಕ್ಷೆಗೆ ಓದುತ್ತಿದ್ದ ವೇಳೆ ಟೆರೆಸ್ ನಿಂದ ಬಿದ್ದು ವಿದ್ಯಾರ್ಥಿ ಸಾವು

mithun
23/04/2022

ದಾವಣಗೆರೆ: ದ್ವಿತೀಯ ಪಿಯು ಪರೀಕ್ಷೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಟೆರೆಸ್ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ನಗರದ ಮಿಥುನ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ.

ಶುಕ್ರವಾರ ರಾತ್ರಿ 11:30ರವರೆಗೂ ಮಿಥುನ್ ಟೆರೆಸ್ ನಲ್ಲಿ ಓದುತ್ತಿದ್ದ. ಪೋಷಕರು ರಾತ್ರಿಯಾಗಿದ್ದರಿಂದ ನಿದ್ದೆ ಮಾಡಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮಿಥುನ್ ಟೆರೆಸ್ ನಿಂದ ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮಿಥುನ್ ಇಂದು ಗಣಿತ ಪರೀಕ್ಷೆ ಬರೆಯಬೇಕಿತ್ತು. ಆದರೆ ಅದಕ್ಕೂ ಮುನ್ನ ದಾರುಣವಾಗಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದ್ದ ಒಬ್ಬನೇ ಪುತ್ರನನ್ನು ಕಳೆದುಕೊಂಡಿರುವ  ಮಿಥುನ್ ಪೋಷಕರ ರೋದನೆ  ಮುಗಿಲು ಮುಟ್ಟಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇನ್ನೆಷ್ಟು ದಿನ ಇರಲಿದೆ ಅಕಾಲಿಕ ಮಳೆ? | ಹವಾಮಾನ ಇಲಾಖೆ ಹೇಳಿದ್ದೇನು?

ಒಂದೇ ಮನೆಯ ಐವರನ್ನು ಹತ್ಯೆ ಮಾಡಿ ಮನೆಗೆ ಬೆಂಕಿ ಇಟ್ಟ ಪಾಪಿಗಳು!

ಯಾವ ಅಪರಾಧಕ್ಕಾಗಿ ಬೆದರಿಕೆ ಹಾಕುತ್ತಿದ್ದೀರಿ?: ಶಾಸಕ ರಘುಪತಿ ಭಟ್ ಗೆ ಹಿಜಾಬ್ ಪರ ವಿದ್ಯಾರ್ಥಿನಿ ಪ್ರಶ್ನೆ

ಅವಳಿ ಮಕ್ಕಳಿಗೆ ಹಾಲುಣಿಸುತ್ತಿದ್ದ ವೇಳೆ ಕುಸಿದುಬಿದ್ದು ತಾಯಿ ಸಾವು

 

ಇತ್ತೀಚಿನ ಸುದ್ದಿ