SSLC ಪರೀಕ್ಷೆಯಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದ ಪೋಷಕರು!

abhushek yallappa
03/05/2025

ಬಾಗಲಕೋಟೆ: SSLC ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ 6ರಲ್ಲೂ ಫೇಲ್ ಆದ ಪುತ್ರನಿಗೆ ಪೋಷಕರು ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ಮೂಡಿಸಿದ ಅಪರೂಪದ ಘಟನೆಯೊಂದು ನಡೆದಿದೆ.

ಬಸವೇಶ್ವರ ಹೈಸ್ಕೂಲ್ನಲ್ಲಿ ಆಂಗ್ಲ ಮಾಧ್ಯಮದಲ್ಲಿ 10ನೇ ತರಗತಿ ಓದಿದ್ದ ಅಭಿಷೇಕ್ ಯಲ್ಲಪ್ಪ ಚೊಳಚಗುಡ್ಡ 625ಕ್ಕೆ 200 ಅಂಕ ಪಡೆದು ಫೇಲ್ ಆಗಿದ್ದ. ಇದರಿಂದಾಗಿ ಆತ ಬಹಳ ಬೇಸರದಲ್ಲಿದ್ದ. ಆತನಿಗೆ ಆತ್ಮಸ್ಥೈರ್ಯ ಮೂಡಿಸಲು ಪೋಷಕರು ಕೇಕ್ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ.

15 ತಿಂಗಳ ಮಗುವಾಗಿದ್ದಾಗ ಎರಡು ಪಾದ ಸುಟ್ಟು ಹೋಗಿದ್ದರಿಂದ ಅಭಿಷೇಕ್ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದ. ಹೀಗಾಗಿ ಚೆನ್ನಾಗಿ ಓದಿದರೂ ಆತನಿಗೆ ಪರೀಕ್ಷೆಯಲ್ಲಿ ಉತ್ತರ ನೆನಪಿನಲ್ಲಿಟ್ಟುಕೊಳ್ಳಲು ಸಾಧ್ಯವಾಗಿಲ್ಲ.

ಹೀಗಾಗಿ ನೊಂದ ಪುತ್ರನಿಗೆ ಪೋಷಕರು ಧೈರ್ಯ ತುಂಬಿದ್ದು, ಮರಳಿ ಯತ್ನವ ಮಾಡು, ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಫೇಲ್ ಆಗಲ್ಲ ಎನ್ನುವ ಧೈರ್ಯ ತುಂಬಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

Exit mobile version