ನವಜಾತ ಶಿಶುವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಚರಂಡಿಗೆಸೆದ ಹೆತ್ತವರು!

ವಿಜಯಪುರ : ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆಯೊಂದು ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಡೆದಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪರ ಗ್ರಾಮದಲ್ಲಿ ನವಜಾತ ಗಂಡು ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿರುವ ಕಾರಣ ಮಗು ಉಸಿರುಗಟ್ಟಿ ಮೃತಪಟ್ಟಿದೆ.
ಪ್ಲಾಸ್ಟಿಕ್ ಚೀಲದಲ್ಲಿ ಮಗು ಇರುವುದನ್ನು ಗಮನಿಸಿದ ಗ್ರಾಮಸ್ಥರು ಮಗುವನ್ನು ಹೊರ ತೆಗೆದಾಗ ಮಗು ಮೃತಪಟ್ಟಿರುವುದು ತಿಳಿದು ಬಂದಿತ್ತು.
ವಿಷಯ ಮುದ್ದೇಬಿಹಾಳ ಠಾಣೆ ಪೊಲೀಸರಿಗೆ ಮುಟ್ಟಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA