ಸಿಬಿಐ ‘ಬಿ’ ರಿಪೋರ್ಟ್ ಗೆ ಒಪ್ಪಿಗೆ ಇಲ್ಲ, ಕೋರ್ಟ್ ಮೆಟ್ಟಿಲೇರಿದ ಪರೇಶ್ ಮೇಸ್ತಾ ಕುಟುಂಬಸ್ಥರು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ 2017ರಲ್ಲಿ ನಡೆದಿದ್ದ ಪರೇಶ್ ಮೇಸ್ತಾ ಸಾವು ಪ್ರಕರಣ ಕುರಿತು ಸಿಬಿಐ ಸಲ್ಲಿಸಿದ್ದ ವರದಿಯಲ್ಲಿ ಸಹಜ ಸಾವು ಎಂದು ಉಲ್ಲೇಖಿಸಿರುವುದನ್ನು ವಿರೋಧಿಸಿ ಆತನ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ಬಿ ರಿಪೋರ್ಟ್ ನಿಂದ ಅತೃಪ್ತಗೊಂಡಿರುವ ಕುಟುಂಬಸ್ಥರು, ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಹೊನ್ನಾವರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣವನ್ನು ಮುಕ್ತಾಯಗೊಳಿಸಲು ಸಿಬಿಐ ‘ಬಿ’ ವರದಿ ಸಲ್ಲಿಸಿದ ನಂತರ, ಅಭಿಪ್ರಾಯವನ್ನು ಸಲ್ಲಿಸುವಂತೆ ನ್ಯಾಯಾಲಯ ಕುಟುಂಬಕ್ಕೆ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ಪರೇಶ್ ತಂದೆ ಕಮಲಾಕರ್ ಮೇಸ್ತಾ ಸಿಬಿಐ ವರದಿಗೆ ಒಪ್ಪಿಗೆಯಿಲ್ಲ ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka