ಗಾಂಧಿ ಜಯಂತಿ ದಿನವೇ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ದೈಹಿಕ ಹಲ್ಲೆ - Mahanayaka
1:31 AM Thursday 13 - February 2025

ಗಾಂಧಿ ಜಯಂತಿ ದಿನವೇ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ದೈಹಿಕ ಹಲ್ಲೆ

kalaburgi
06/10/2021

ಕಲಬುರ್ಗಿ: ಕಾಳಗಿ ತಾಲ್ಲೂಕಿನ ರೇವಗ್ಗಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪರಿಶಿಷ್ಟ ವಿದ್ಯಾರ್ಥಿನಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮಲಕಪ್ಪ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಗಾಂಧಿ ಜಯಂತಿ ಕಾರ್ಯಕ್ರಮದಂದು ಶಾಲೆಯನ್ನು ಸ್ವಚ್ಛಗೊಳಿಸಲು ಶಿಕ್ಷಕ ಹೇಳಿದ್ದರು. ಆದರೆ,  ವಿದ್ಯಾರ್ಥಿನಿ ಕೆಲಸ ಮಾಡಿಲ್ಲ ಎಂಬ ಕೋಪದಿಂದ ದೈಹಿಕ ಶಿಕ್ಷಕ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದ್ದು, ಎಸೆಸೆಲ್ಸಿ ವಿದ್ಯಾರ್ಥಿನಿ ಈ ಬಗ್ಗೆ ದೂರಿದ್ದು, ಈ ವಿಡಿಯೋ ವೈರಲ್ ಆಗಿದೆ.

ಶಾಲೆಯ ಆವರಣದಲ್ಲಿ ವಿದ್ಯಾರ್ಥಿನಿಯರು ಅಳುತ್ತಾ ಘಟನೆಯನ್ನು  ವಿವರಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಿಗ್ಗೆಯಿಂದ ಉಪಾಹಾರ ಸೇವಿಸದೇ ಕೆಲಸ ಮಾಡಿದರೂ ಶಿಕ್ಷಕರಿಗೆ ತೃಪ್ತಿಯಾಗಿಲ್ಲ. ಇನ್ನಷ್ಟು ಕೆಲಸ ಮಾಡಲು ಹೇಳಿದರು. ಈ ಸಂದರ್ಭದಲ್ಲಿ ಮನಬಂದಂತೆ ಥಳಿಸಿದ್ದಾರೆ ಎಂದು ವಿದ್ಯಾರ್ಥಿನಿ ನೋವು ತೋಡಿಕೊಂಡಿದ್ದಾಳೆ.

ಇನ್ನೂ ವಿದ್ಯಾರ್ಥಿನಿಯರಿಗೆ ಹಲ್ಲೆ ನಡೆಸಿರುವುದನ್ನು  ಶಿಕ್ಷಕ ಮಲಕಪ್ಪ ಒಪ್ಪಿಕೊಂಡಿದ್ದು, ಸಿಟ್ಟಿನ ಗಳಿಗೆಯಲ್ಲಿ ವಿದ್ಯಾರ್ಥಿನಿಗೆ ಹೊಡೆದಿದ್ದೇನೆ. ಇದಕ್ಕಾಗಿ ವಿದ್ಯಾರ್ಥಿನಿ ಹಾಗೂ ಪೋಷಕರ ಕ್ಷಮೆ ಕೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನೂ ಈ ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಮಲಕಪ್ಪ ಅವರಿಗೆ ಕ್ರೈಸ್‌ನ ಜಿಲ್ಲಾ ಸಂಯೋಜಕ ಶಿವರಾಮ ಚವ್ಹಾಣ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಬಗ್ಗೆ ವಿವರಣೆ ನೀಡಲು ಬುಧವಾರ ಹಾಜರಾಗುವಂತೆ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಎಂ.ವೈ. ಸುರಪುರ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಸಾವಿನ ಕೊನೆಯ ಕ್ಷಣದಲ್ಲಿ “ಅಪ್ಪಾ ಬೇಗ ಬನ್ನಿ” ಎಂದು ಮಗ ಹೇಳಿದ್ದ | ಮಗನ ಸಾವು ನೆನೆದು ಬಿಕ್ಕಿಬಿಕ್ಕಿ ಅತ್ತ ರೈತ

ಲಖೀಂಪುರ್ ಖೇರ್ ಸಚಿವನ ಪುತ್ರ ರೈತರನ್ನು ಕೆಣಕಿ, ಗುಂಡು ಹಾರಿಸಿದ್ದ | ಎಫ್ ಐಆರ್ ನಲ್ಲಿ ಉಲ್ಲೇಖ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಗನ ಬರ್ಬರ ಹತ್ಯೆ | ತಾಯಿ ಹಾಗೂ ಆಕೆಯ ಪ್ರಿಯಕರ ಅರೆಸ್ಟ್

ಏಕಾಏಕಿ ಮುರಿದು ಬಿದ್ದ ತೂಗು ಸೇತುವೆ | ನದಿಗೆ ಬಿದ್ದ 30 ವಿದ್ಯಾರ್ಥಿಗಳು

ಹಾನಗಲ್, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಸಚಿವ ಸಿ.ಸಿ.ಪಾಟೀಲ್ ಕಾರು ಬೈಕ್ ಗೆ ಡಿಕ್ಕಿ | ಬೈಕ್ ಸವಾರನನ್ನು ಬಿಟ್ಟು ಸಚಿವರನ್ನು ರಕ್ಷಿಸಲು ಪೊಲೀಸರಿಂದ ಯತ್ನ!?

ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾ ಹೊಂದಿದೆ | ಹೆಚ್.ಡಿ.ಕುಮಾರಸ್ವಾಮಿ

ಶಾಕಿಂಗ್ ನ್ಯೂಸ್: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ!

ಇತ್ತೀಚಿನ ಸುದ್ದಿ